ಡಿ.ಕೆ ಶಿವಕುಮಾರ್ 
ರಾಜಕೀಯ

ಕೆಲದಿನಗಳಿಂದ ನನಗೆ ಗ್ರಹಣ ಹಿಡಿದಿತ್ತು, ಈಗ ಅದರಿಂದ ಮುಕ್ತಿ ದೊರೆತಿದೆ: ಡಿಕೆ ಶಿವಕುಮಾರ್

ಕೆಲವು ದಿನಗಳಿಂದ ನನಗೆ ಗ್ರಹಣ ಹಿಡಿದಿತ್ತು, ಈಗ ಅದರಿಂದ ಬಿಡುಗಡೆಯಾಗಿದೆ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್...

ಬೆಂಗಳೂರು: ಕೆಲವು ದಿನಗಳಿಂದ ನನಗೆ ಗ್ರಹಣ ಹಿಡಿದಿತ್ತು, ಈಗ ಅದರಿಂದ ಬಿಡುಗಡೆಯಾಗಿದೆ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಆದಾಯ ತೆರಿಗೆ ಇಲಾಖೆ ದಾಳಿಯ ನಂತರ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್, ಯಾವ ಯಾವ ಸ್ಥಳಗಳಲ್ಲಿ ಆಪರೇಷನ್ ನಡೆದಿವೆ ಎಂಬುದರ ಬಗ್ಗೆ ನನಗೆ ಗೊತ್ತು. ಆದರೆ ಇಲ್ಲಿ ಅವುಗಳನ್ನು ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ನಾನು ಸಂಕಷ್ಟದಲ್ಲಿದ್ದಾಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರು ನನಗೆ ಬೆಂಬಲ ಸೂಚಿಸಿದ್ದಾರೆ. ನನಗೆ ಧೈರ್ಯ ಹೇಳಿದ್ದಾರೆ. ಸಚಿವ ಗಿರಿ ಬರುತ್ತೆ ಹೋಗುತ್ತೆ, ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಾನು ಸಚಿವನಾಗಿದ್ದೆ. ಆಗ ಅವಧಿ ಪೂರ್ವ ಚುನಾವಣೆ ಎದುರಾಗಿತ್ತು. ಅನಂತರ ನಾನು ಯಾವುದೇ ಸಚಿವ ಹುದ್ದೆ ಬಯಸಿರಲಿಲ್ಲ ಎಂದು ತಿಳಿಸಿದ್ದಾರೆ. 
ಗುಜರಾತ್ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ 44 ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಆಪರೇಷನ್ ಕಮಲಕ್ಕೊಳಪಡಬಹುದು ಎಂಬ ಭೀತಿಯಲ್ಲಿ ಬೆಂಗಳೂರಿಗೆ ಕರೆತಂದು ರೆಸಾರ್ಟ್ ನಲ್ಲಿರಿಸಲಾಗಿತ್ತು. ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವಿಗೆ ಕಾರಣವಾದ ಡಿ.ಕೆ ಶಿವಕುಮಾರ್ ಅವರನ್ನು ಎಲ್ಲರೂ ಅಭಿನಂದಿಸಿದ್ದಾರೆ.
ಮನ್ ಕೀ ಬಾತ್ ನಿಂದ ಹಸಿದವರ ಹೊಟ್ಟೆ ತುಂಬುವುದಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ದೇಶಾದ್ಯಂತ ಎಲ್ಲಾ ಪ್ರದೇಶಗಳಲ್ಲೂ ದಲಿತರು ಹಾಗೂ ಮುಸಲ್ಮಾನರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT