ಅಮಿತ್ ಶಾ 
ರಾಜಕೀಯ

ಅಮಿತ್ ಶಾ ಮೂರು ದಿನಗಳ ಕರ್ನಾಟಕ ಭೇಟಿ; ಜನಸಾಮಾನ್ಯರ ಮನವೊಲಿಕೆ ಯತ್ನ

ನಾಳೆಯಿಂದ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ...

ಬೆಂಗಳೂರು: ನಾಳೆಯಿಂದ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಇದು ಮಹತ್ವದ ಭೇಟಿಯಾಗಿದೆ.  ಕೇವಲ ರಾಜ್ಯದ ಜನತೆಗೆ ಮಾತ್ರ ಅವರ ಭೇಟಿ ಕುತೂಹಲ ಮೂಡಿಸಿರುವುದಲ್ಲದೆ ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಇಲ್ಲಿನ ಜನತೆಯ ನಾಡಿಮಿಡಿತವನ್ನು ಅರ್ಥ ಮಾಡಿಕೊಳ್ಳುವುದು ಅಮಿತ್ ಶಾ ಅವರಿಗೆ ಕೂಡ ಮುಖ್ಯವಾಗಿದೆ. 
ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ವಿವಿಧ ಶಾಖೆಗಳ ಜೊತೆ ಮೂರು ದಿನ ಸುಮಾರು 25 ಸಭೆಗಳಲ್ಲಿ ಭಾಗವಹಿಸಲಿರುವ ಅಮಿತ್ ಶಾ ತಮ್ಮ ಮೊದಲ ದಿನದ ಭೇಟಿಯಲ್ಲಿ ಜೀವನದ ವಿವಿಧ ಹಂತಗಳ ಪ್ರಮುಖ ವ್ಯಕ್ತಿಗಳೊಂದಿಗೆ ವಿಶೇಷ ಸಂವಾದದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಸಂಜೆ ಬೆಂಗಳೂರಿನ ಪ್ರಮುಖ ಸ್ಟಾರ್ ಹೊಟೇಲೊಂದರಲ್ಲಿ ನಡೆಯಲಿರುವ ಸಂವಾದದಲ್ಲಿ ಸುಮಾರು 400 ಬುದ್ಧಿ ಜೀವಿಗಳು ಮತ್ತು ಪ್ರಮುಖ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ. ವಕೀಲರು, ವೈದ್ಯರು, ಸಾಹಿತಿಗಳು, ಸೇನಾಪಡೆ ನಿವೃತ್ತರು ಮತ್ತು ನಿವೃತ್ತ ಆಡಳಿತಗಾರಿಗೆ ಸಂವಾದಕ್ಕೆ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕಾರ್ಯಕರ್ತರು, ಅಮತ್ ಶಾ ಅವರು ಕಳೆದ ಮೂರು ವರ್ಷಗಳಲ್ಲಿ ಪಕ್ಷದ ರ್ಯಾಂಕ್ ಮತ್ತು ದಾಖಲೆಗಳಲ್ಲಿ ರಾಷ್ಟ್ರಾಧ್ಯಕ್ಷರಾಗಿ ತಮ್ಮ ಸಾಮರ್ಥ್ಯವನ್ನು ಮೆರೆದಿದ್ದಾರೆ. ಅವರು ಬುದ್ದಿಜೀವಿಗಳ ಮನಗೆಲ್ಲುತ್ತಾರೆ ಕೂಡ. ಪಕ್ಷದ ಮೂಲ ನೆಲೆಯನ್ನು ಸಾರ್ವಜನಿಕವಾಗಿ ವಿಸ್ತರಿಸುವಲ್ಲಿ ಅವರು ಕೆಲಸ ಮಾಡಿದ್ದು  ಸಮಾಜದ ವಿವಿಧ ವರ್ಗಗಳ ಜನರನ್ನು ತಲುಪುವಲ್ಲಿ ಕೂಡ ಅವರು ಶ್ರಮಪಡುತ್ತಾರೆ ಎಂದರು. ನಾಳಿನ ಸಂವಾದ ಕಾರ್ಯಕ್ರಮಕ್ಕೆ ಯಾರ್ಯಾರಿಗೆ ಆಹ್ವಾನ ನೀಡಲಾಗಿದೆ ಎಂದು ಬಹಿರಂಗಪಡಿಸಿಲ್ಲ.
ಪಕ್ಷದ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಅಡ್ವೊಕೇಟ್ ಜನರಲ್ ಅಶೋಕ್ ಹಾರನಹಳ್ಳಿ, ಖ್ಯಾತ ಬರಹಗಾರ ಮತ್ತು ನಿರ್ದೇಶಕ ಟಿ.ಎನ್.ಸೀತಾರಾಮ್, ಎಲ್.ಎಸ್.ಶೇಷಗಿರಿ ರಾವ್, ಬರಹಗಾರ ಸುಮತೇಂದ್ರ ನಾಡಿಗ್, ಇತಿಹಾಸತಜ್ಞ ಚಿದಾನಂದ ಮೂರ್ತಿ, ಖ್ಯಾತ ವೈದ್ಯರಾದ ಡಾ.ದೇವಿ ಶೆಟ್ಟಿ, ಡಾ.ಭುಜಂಗ ಶೆಟ್ಟಿ, ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಮೊದಲಾದವರಿಗೆ ಆಹ್ವಾನವಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ