ರಾಯಚೂರಿನ ಸಮಾವೇಶದಲ್ಲಿ ರಾಹುಲ್ ಗಾಂಧಿ 
ರಾಜಕೀಯ

ಮೋದಿ ಸರ್ಕಾರದಿಂದ ಸುಳ್ಳು ಭರವಸೆ, ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಬಿಜೆಪಿ ಮತ್ತು..

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಹಿಂದುಳಿದವರ ಧ್ವನಿ ಕೇವಲ ಕಾಂಗ್ರೆಸ್ ಮಾತ್ರ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಹೇಳಿದರು.
ಇಂದು ರಾಯಚೂರಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಜೆಪಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯನವರು ಎರಡು ದಿನದಲ್ಲಿಯೇ ರೈತರ ಸಾಲವನ್ನು ಮನ್ನಾ ಮಾಡಿದ್ದರು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾಕೆ ಸಾಲ ಮನ್ನಾ ಮಾಡಿಲ್ಲ ಎಂದು ಪ್ರಶ್ನಿಸಿದರು.
ನಾವು ಯಾವುದೇ ಭರವಸೆಗಳನ್ನು ನೀಡುವುದಿಲ್ಲ. ಆದರೆ ಮಾಡಿ ತೋರಿಸುತ್ತೇವೆ. ಕರ್ನಾಟಕ ಮತ್ತು ಪಂಜಾಬ್ ನಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ ಎಂದರು. 
ಯುಪಿಎ ಸರ್ಕಾರ ಮೂರೇ ತಿಂಗಳಿನಲ್ಲಿ ಹೈದರಬಾದ್ ಕರ್ನಾಟಕಕ್ಕೆ ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಸರ್ಕಾರ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಮಾತೆತ್ತಿದರೆ ಕಾಂಗ್ರೆಸ್ ಮುಕ್ತ ಮಾಡುವ ಹೇಳಿಕೆ ನೀಡುತ್ತಿದೆ. ಆದರೆ ಯಾರಿಂದಲೂ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ನಿಮ್ಮೆಲ್ಲರ ಆಶೀರ್ವಾದದಿಂದ ನಾವು ನುಡಿದಂತೆ ನಡೆದಿದ್ದೇವೆ. ಇನ್ನು 8 ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹಾಗಾಗಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಹಿಂದುಳಿದ ವರ್ಗಗಳ ಬಗ್ಗೆ ಮೋದಿ ಸರ್ಕಾರ ಮೊಸಳೆ ಕಣ್ಣೀರು ಹಾಕುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ