ರಾಜಕೀಯ

ಗೋರಕ್ ಪುರ ದುರಂತ ಒಂದು ಆಕಸ್ಮಿಕ, ಭಾರತದಲ್ಲಿ ಇಂಥ ಘಟನೆಗಳು ಸಂಭವಿಸುತ್ತೇವೆ: ಅಮಿತ್ ಶಾ

Lingaraj Badiger
ಬೆಂಗಳೂರು: ಸುಮಾರು 70 ಅಮಾಯಕ ಮಕ್ಕಳನ್ನು ಬಲಿ ಪಡೆದ ಗೋರಕ್'ಪುರ ಆಸ್ಪತ್ರೆ ದುರಂತ ಒಂದು ಆಕಸ್ಮಿಕ ಎಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಭಾರತದಂತಹ ದೊಡ್ಡ ದೇಶಗಳಲ್ಲಿ ಇಂಥಹ ಘಟನೆಗಳು ಹಾಗಾಗ ಸಂಭವಿಸುತ್ತವೆ ಎಂದು ಸೋಮವಾರ ಹೇಳಿದ್ದಾರೆ.
ಮೂರು ದಿನಗಳ ರಾಜ್ಯ ಬಿಜೆಪಿ ನಾಯಕರ ಜತೆಗಿನ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ಗೋರಕ್'ಪುರ ಆಸ್ಪತ್ರೆ ದುರಂತ ಒಂದು ಆಕಸ್ಮಿಕ. ಈ ಕುರಿತು ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿರ್ಧಿಷ್ಟ ಸಮಯದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ಗೋರಖಪುರ ದುರಂತದಂಥ ಘಟನೆ ನಡೆದಿರುವುದು ದೇಶದಲ್ಲಿ ಇದೇ ಮೊದಲಲ್ಲ. ಭಾರತದಂಥ ದೊಡ್ಡ ದೇಶದಲ್ಲಿ ಇಂಥ ಘಟನೆಗಳು ಈ ಹಿಂದೆಯೂ ನಡೆದಿವೆ. ಆದರೆ ರಾಜಿನಾಮೆ ಕೇಳುವುದು ಕಾಂಗ್ರೆಸ್‌ ನ ಕೆಲಸ ಎಂದು ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.
ಘಟನೆಗೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದ ಕಾಂಗ್ರೆಸ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿತ್ತು.
SCROLL FOR NEXT