ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ವಾಗ್ದಾಳಿ ಮುಂದುವರಿಸಿದ್ದಾರೆ. ಅಮಿತ್ ಶಾ ತಂತ್ರ ಗುಜರಾತ್ ನಲ್ಲಿ ನಡೆಯಬಹುದೇ ಹೊರತು ಕರ್ನಾಟಕದಲ್ಲಲ್ಲ ಎಂದು ಹೇಳಿದ್ದಾರೆ.
71ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಮಿತ್ ಶಾ ರಾಜ್ಯಕ್ಕೆ ಬರುವುದರಿಂದ ನಮಗೇನೂ ಭಯವಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ನಾಲ್ಕು ವರ್ಷಗಳಲ್ಲಿ ಉತ್ತಮ ಕೆಲಸ ಮಾಡಿದೆ. ಆದರೆ, ಅಮಿತ್ ಶಾ ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಜೈಲಿಗೆ ಹೋಗಿ ಬಂದವರನ್ನು ಬಿಜೆಪಿಯವರು ತಮ್ಮ ನಾಯಕರೆಂದು ಬಿಂಬಿಸುತ್ತಿದ್ದಾರೆ. ಅಂದ ಮೇಲೆ ಭ್ರಷ್ಟಾಚಾರದ ಅರ್ಥ ಏನೆಂದು ಅಮಿತ್ ಶಾ ಹೇಳಬೇಕು ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ.
ಹಿಂದಿನ ಸರ್ಕಾರದಲ್ಲಿ ಅಕ್ರಮ ಗಣಿಗಾರಿಕೆ, ಚೆಕ್ ಮೂಲಕ ಲಂಚ ಪಡೆದು ಜೈಲಿಗೆ ಹೋಗಿ ಬಂದವರು ಬಿಜೆಪಿಯಲ್ಲಿಯೇ ಇದ್ದಾರೆ. ಅಮಿತ್ ಶಾ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ ಎಂದು ಪರಮೇಶ್ವರ್ ಸವಾಲು ಹಾಕಿದರು. ಕಾಂಗ್ರೆಸ್ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದರೇ ಬಿಜೆಪಿ ಕೋಮುವಾದವನ್ನು ಉತ್ತೇಜಿಸುತ್ತಿದೆ ಎಂದು ಪರಮೇಶ್ವರ್ ಹರಿಹಾಯ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics