ಡಿ.ಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ 
ರಾಜಕೀಯ

ಡಿ.ಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸಚಿವರುಗಳಾದ ಡಿ.ಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಅವರು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ಆಗಸ್ಟ್ 18 ...

ಬೆಂಗಳೂರು: ಸಚಿವರುಗಳಾದ ಡಿ.ಕೆ ಶಿವಕುಮಾರ್  ಮತ್ತು ರಮೇಶ್ ಜಾರಕಿಹೊಳಿ ಅವರು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ಆಗಸ್ಟ್ 18 ರಂದು ಪ್ರತಿಭಟನೆ ನಡೆಸಲಿದೆ.
ಬುಧವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಆಗಸ್ಟ್ 18 ರಂದು ಫ್ರೀಡಂ ಪಾರ್ಕ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಆದಾಯ ತೆರಿಗೆ ಇಲಾಖೆ ದಾಳಿಗೆ ಗುರಿಯಾಗಿರುವ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ  ಮುಂದಿನ ಒಂದು ವಾರದ ಕಾಲ ವಿಧಾನಸೌಧ ಸುತ್ತಮುತ್ತ ಪ್ರತಿಭಟನೆ ಹಾಗೂ ರ್ಯಾಲಿಗಳನ್ನು ನಡೆಸುವುದಾಗಿ ಹೇಳಿದ್ದಾರೆ.
ಇಬ್ಬರು ಸಚಿವರು ಸೇರಿದಂತೆ ಭ್ರಷ್ಟಾಚಾರ ನಡೆಸಿರುವ ಇನ್ನಿತರ ಸಚಿವರುಗಳು ಅವರ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. 
ಇದಕ್ಕೂ ಮುನ್ನ ಬೆಂಗಳೂರಿನ  ಮಳೆ ಪೀಡಿತ ಪ್ರದೇಶಗಳಿಗೆ ಯಡಿಯೂರಪ್ಪ ಮತ್ತು ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚರಂಡಿಗಳಲ್ಲಿರುವ ಹೂಳು ತೆಗೆಯಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!