ರಾಜಕೀಯ

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿಂದ ಸಿಎಂ ಇಬ್ರಾಹಿಂಗೆ ಟಿಕೆಟ್

Lingaraj Badiger
ನವದೆಹಲಿ: ಆಗಸ್ಟ್ 31ರಂದು ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಮೊದಲಿನಿಂದಲೂ ಮೇಲ್ಮನೆ ಸ್ಥಾನಕ್ಕಾಗಿ, ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಡುತ್ತಲೇ ಬಂದಿದ್ದ ಇಬ್ರಾಹಿಂ ಅವರನ್ನು ಅಲ್ಪಾವಧಿಗಾದರೂ, ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಬೇಕೆಂದು ಸಿಎಂ ತೀವ್ರ ಪ್ರಯತ್ನ ನಡೆಸಿ, ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದರು. ಸಿಎಂ ಪಟ್ಟು ಹಿಡಿದಿದ್ದರಿಂದ ಹೈಕಮಾಂಡ್‌ ಇಬ್ರಾಹಿಂಗೆ ಟಿಕೆಟ್‌ ನೀಡಲು ಒಪ್ಪಿಗೆ ಸೂಚಿಸಿದೆ. 
ವಿಧಾನ ಪರಿಷತ್ ಚುನಾವಣೆಗೆ ಸಿಎಂ ಇಬ್ರಾಹಿಂ ಅವರಿಗೆ ಟಿಕೆಟ್ ನೀಡಿರುವುದಾಗಿ ಎಐಸಿಸಿ ಇಂದು ಅಧಿಕೃತ ಪ್ರಕಟಿಸಿದೆ.
ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಆಗಸ್ಟ್ 31 ರಂದು ಚುನಾವಣೆ ನಡೆಯಲಿದೆ.
SCROLL FOR NEXT