ರಾಜಕೀಯ

ವಿಧಾನ ಪರಿಷತ್ ಸದಸ್ಯರಾಗಿ ಸಿಎಂ ಇಬ್ರಾಹಿಂ ಅವಿರೋದ ಆಯ್ಕೆ

Lingaraj Badiger
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ವಿಧಾನ ಪರಿಷತ್ ನೂತನ ಸದಸ್ಯರಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿಎಂ ಇಬ್ರಾಹಿಂ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಜೆಡಿಎಸ್ ನಿಂದ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರು ಅವಿರೋಧವಾಗಿ ವಿಧಾನಸಭೆ ಕಾರ್ಯದರ್ಶಿ ಎಸ್ ಮೂರ್ತಿ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.
ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಆಗಸ್ಟ್ 31 ರಂದು ಚುನಾವಣೆ ನಿಗದಿಯಾಗಿತ್ತು. ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ಅವರು ಮಂಗಳವಾರ ನಾಮ ಪತ್ರ ಸಲ್ಲಿಸಿದ್ದರು. ಅವರಿಗೆ  ಮುಖ್ಯಮಂತ್ರಿ ಸಿದ್ಧರಾಮಯ್ಯ, ವಿಧಾನಸಭೆಯ ಉಪಾಧ್ಯಕ್ಷ ಶಿವಶಂಕರರೆಡ್ಡಿ, ರಾಮಲಿಂಗರೆಡ್ಡಿ ಸೇರಿದಂತೆ ಹತ್ತು ಮಂದಿ ಸೂಚಕರಾಗಿ ಸಹಿ ಹಾಕಿದ್ದರು.
SCROLL FOR NEXT