ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮಿಷನ್ 113ಕ್ಕೆ ಜೆಡಿಸ್ ರಣತಂತ್ರ: ಡಿಕೆಶಿ ಬೆಂಬಲಕ್ಕೆ ನಿಂತ ಎಚ್ ಡಿಕೆ?

ಇತ್ತೀಚೆಗೆ ಸಿ ಪೋರ್ ಸಂಸ್ಥೆ ಬಿಡುಗಡೆ ಮಾಡಿರುವ ಚುನಾವಣಾ ಪೂರ್ವ ಸಮೀಕ್ಷೆ ದೊಡ್ಡ ಬೋಗಸ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ...

ಬೆಂಗಳೂರು:  ಇತ್ತೀಚೆಗೆ ಸಿ ಪೋರ್ ಸಂಸ್ಥೆ ಬಿಡುಗಡೆ ಮಾಡಿರುವ ಚುನಾವಣಾ ಪೂರ್ವ ಸಮೀಕ್ಷೆ ದೊಡ್ಡ ಬೋಗಸ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ ಫೋರ್ ಸಂಸ್ಥೆ ತನ್ನ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬರಲಿದೆ ಎಂಬ ವರದಿ ನೀಡಿದೆ. ‘ಸಿ ಫೋರ್ ಸಂಸ್ಥೆ ಮುಖ್ಯಸ್ಥ ಪ್ರೇಮಚಂದ್ ಪಲೇಟಿ ಅವರು ನಿವೃತ್ತ ಐಪಿಎಸ್‌ ಅಧಿಕಾರಿ ಕೆಂಪಯ್ಯ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಅತ್ಯಂತ ಆಪ್ತರಾಗಿದ್ದಾರೆ. ಇಂಥವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.
ಸರ್ಕಾರ ರಚಿಸಿರುವ ವಿಷನ್ ಗ್ರೂಪ್‌ ಸದಸ್ಯರು ಕೂಡ ಅವರೇ ಆಗಿದ್ದಾರೆ. ಇಂತವರು ನಡೆಸುವ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಗೆ 230 ಸ್ಥಾನ ಬಂದರೂ ಅಚ್ಚರಿಯಲ್ಲ ಎಂದು  ವ್ಯಂಗ್ಯವಾಡಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 113 ಸೀಟುಗಳನ್ನು ಗೆಲ್ಲಲಿದೆ. ಇದನ್ನು ನಾನು ಸವಾಲಾಗಿ ಸ್ವೀಕರಿಸಿದ್ದೇನೆ, ಕಾಂಗ್ರೆಸ್ 25-30 ಹಾಗೂ ಬಿಜೆಪಿ 10-15 ಸೀಟು ಗೆಲ್ಲುವುದು. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ನದ್ದೇ ಗೆಲುವು ಎಂದು ಅವರು ಭರವಸೆ ವ್ಯಕ್ತ ಪಡಿಸಿದ್ದಾರೆ.
ಗುಪ್ತಚರ ಇಲಾಖೆಯ ವರದಿಗಳು ಕೂಡ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 60ಕ್ಕಿಂತ ಹೆಚ್ಚಿನ ಸೀಟು ಗೆಲ್ಲಲಿದೆ. ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಯಸಿವೆ ಎಂದು ವರದಿ ತಿಳಿಸಿದೆ ಎಂದು ಕುಮಾರ ಸ್ವಾಮಿ ತಿಳಿಸಿದ್ದಾರೆ.
ಸಚಿವ ಡಿ.ಕೆ. ಶಿವಕುಮಾರ್‌ ಮನೆಯ ಮೇಲೆ ದಾಳಿ ನಡೆದಾಗ ಆದಾಯಕ್ಕೆ ಮೀರಿದ ಆಸ್ತಿ ಸಿಕ್ಕಿಲ್ಲ. ಹೀಗಿರುವಾಗ ಅವರ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ ಎಂದು ಎಚ್.ಡಿ. ಕುಮಾರಸ್ವಾಮಿ ಪ್ರತಿಪಾದಿಸಿದರು. ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸೂಚಿಸಿದರು ಎಂಬ ಕಾರಣಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಮತ್ತು ಹಲವರು ಶಿವಕುಮಾರ್‌ ರಾಜೀನಾಮೆಗೆ ಆಗ್ರಹಿಸಿದ್ದು ಹಾಸ್ಯಾಸ್ಪದ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT