ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಶೀಘ್ರವೇ ನೆರವೇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ನಿನ್ನೆ
ಭೇಟಿಯಾದಾಗ ಪಕ್ಷದ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಅವರು ಇದೇ 30ರಂದು ಬೆಂಗಳೂರಿಗೆ ಬರಲಿದ್ದಾರೆ ಎಂದು ತಿಳಿಸಿದರು.
ಬಡ್ತಿ ಮೀಸಲಾತಿ ಕುರಿತು ಸುಗ್ರೀವಾಜ್ಞೆಯ ಬಗ್ಗೆ ರಾಜ್ಯಪಾಲರಿಗೆ ಸೂಕ್ತ ವಿವರಣೆ ನೀಡುವಂತೆ ಕಾನೂನು ಸಚಿವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.ರಾಜ್ಯಪಾಲರು, ಈ ಸುಗ್ರೀವಾಜ್ಞೆಗೆ
ಆತುರವೇನಿತ್ತು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಕಾನೂನು ಸಚಿವರು ವಿವರಣೆ ನೀಡಲಿದ್ದಾರೆ ಎಂದರು.
ಡಿವೈಎಸ್ಪಿ ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಆ ಪಕ್ಷದ ನಾಯಕರು ಮಾಡಿರುವ ಆರೋಪಗಳು ಸುಳ್ಳು. ಪ್ರಕರಣ ಕುರಿತು, ತನಿಖೆ ನಡೆಸಿ ಸಿಐಡಿ ವರದಿ ಕೊಟ್ಟಿದೆ. ಪ್ರಕರಣ ಈಗ ಸುಪ್ರೀಂಕೋರ್ಟ್‍ನಲ್ಲಿದೆ. ಈ ಹಂತದಲ್ಲಿ ಸಿಬಿಐಗೆ ವಹಿಸುವುದು ಹೇಗೆ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್‍ನಿಂದ ಒಪ್ಪಿಗೆ ದೊರೆತಿದ್ದು, ಮುಖ್ಯಮಂತ್ರಿಗಳು ಇದಕ್ಕೆ ದಿನಾಂಕ ನಿಗದಿ ಮಾಡಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಕೂಡ ಬೆಂಗಳೂರಿನಲ್ಲಿಂದು ತಿಳಿಸಿದರು. ಚುನಾವಣೆ ಎದುರಿಸಲು ಬಿಜೆಪಿ ಸಜ್ಜಾಗಿಲ್ಲ. ಪ್ರತಿಪಕ್ಷಗಳಿಗೆ ಮಾತನಾಡಲು ಹೆಚ್ಚಿನ ವಿಷಯಗಳಿಲ್ಲ. ಹೀಗಾಗಿ ಅನವಶ್ಯಕವಾಗಿ ಸಿಫೋರ್ ಸಮೀಕ್ಷೆ ಕುರಿತು ಅಸಮಾಧಾನ ವ್ಯಕ್ತಪಡಿಸುತ್ತಿವೆ ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics