ವಿನಯ್ ಕುಲಕರ್ಣಿ-ಪ್ರಹ್ಲಾದ್ ಜೋಶಿ 
ರಾಜಕೀಯ

ಪ್ರಹ್ಲಾದ್ ಜೋಶಿ ಲಿಂಗಾಯತರ ವಿರೋಧಿ: ಸಚಿವ ವಿನಯ್ ಕುಲಕರ್ಣಿ ಬೆಂಬಲಿಗರ ಆರೋಪ

ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಮತ್ತು ಸಂಸದ ಪ್ರಹ್ಲಾದ್ ಜೋಶಿ ...

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಮತ್ತು ಸಂಸದ ಪ್ರಹ್ಲಾದ್ ಜೋಶಿ ಅವರ ನಡುವಿನ ವಿವಾದ ಹೊಸ ತಿರುವು ಪಡೆದಿದ್ದು ಇದೀಗ ಸಚಿವರ ಬೆಂಬಲಿಗರು ಸಂಸದ ಪ್ರಹ್ಲಾದ್ ಜೋಶಿಯನ್ನು ಲಿಂಗಾಯತ ವಿರೋಧಿ ಎಂದು ಆರೋಪಿಸಿದ್ದಾರೆ.
ಕುಲಕರ್ಣಿಯವರ ನೂರಾರು ಮಂದಿ ಬೆಂಬಲಿಗರು ಲಿಂಗಾಯತ ಸಮುದಾಯದ ಉಪ ಜಾತಿಗಳ ಒಕ್ಕೂಟ ಎಂಬ ಬ್ಯಾನರ್ ನಡಿ ನಿನ್ನೆ ಸಂಸದ ಜೋಶಿಯವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಅವರ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು.
ಇತ್ತೀಚೆಗೆ ಹತ್ಯೆಗೀಡಾದ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಅವರ ಕುಟುಂಬ ಸದಸ್ಯರ ಜೊತೆ ಹಿರಿಯ ಪೊಲೀಸ್ ಅಧಿಕಾರಿಯ ಮೂಲಕ ಸಚಿವ ವಿನಯ್ ಕುಲಕರ್ಣಿ ಸಂಧಾನ ಮಾಡಿಸುವ ಆಡಿಯೊ ಮತ್ತು ವಿಡಿಯೊ ಇತ್ತೀಚೆಗೆ ಟಿವಿ ಚಾನೆಲ್ ವೊಂದರಲ್ಲಿ ಪ್ರಸಾರವಾಗಿತ್ತು. ಈ ಆಡಿಯೊ ಮತ್ತು ವಿಡಿಯೊ ಕ್ಲಿಪ್ ಸಚಿವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು ಇದರ ಹಿಂದೆ ಸಂಸದ ಜೋಶಿಯವರ ಕೈವಾಡವಿದೆ ಎಂದು ಕುಲಕರ್ಣಿ ಆರೋಪಿಸಿದ್ದಾರೆ.
ಇದೀಗ ಸಚಿವರ ಬೆಂಬಲಿಗರು ಜೋಷಿ ಅವರನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ. ನಿನ್ನೆ ಬೆಂಗೆರಿ ಮೈದಾನದಲ್ಲಿ ಜಮಾಯಿಸಿದ ಲಿಂಗಾಯತ ಸಮುದಾಯದ ಉಪ ಜಾತಿಗಳ ಒಕ್ಕೂಟ ಸದಸ್ಯರು ಜೋಶಿಯವರ ನಿವಾಸಕ್ಕೆ ಮೆರವಣಿಗೆ ಹೊರಟು ಅವರ ವಿರುದ್ಧ ಘೋಷಣೆ ಕೂಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!