ಮೈಸೂರು: ಪ್ರಧಾನಿಯವರನ್ನು ನೀಚ ಎಂದು ಟೀಕಿಸಿದ ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅದು ಕಾಂಗ್ರೆಸ್ ಸಂಸ್ಕೃತಿ. ಇಂತಹ ಕ್ರಮವನ್ನು ಬಿಜೆಪಿಯಿಂದ ನಿರೀಕ್ಷೆ ಮಾಡಲು ಬಿಜೆಪಿಯಿಂದ ನಿರೀಕ್ಷಿಸಲು ಸಾಧ್ಯವೇ. ಕೋಮುವಾದಿ ಪಕ್ಷದಿಂದ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಭಾಷೆ ಗಮನಿಸಿದ್ದೇನೆ, ನಾಲಿಗೆ ಸಂಸ್ಕೃತಿ ಹೇಳುತ್ತದೆ. ಆಚಾರವಿಲ್ಲದ ನಾಲಿಗೆ ಎಂದು ದಾಸರು ಹೇಳಿದ್ದಾರೆ. ನಮಗೆ ನಮ್ಮದೇ ಆದ ಸಂಸ್ಕೃತಿಯಿದೆ. ನಮಗೆ ಸಂಸ್ಕಾರ ಇದೆ ಎಂದು ಬಿಜೆಪಿಯವರು ಹೇಳುತ್ತಾರೆ. ಇದುವೇ ಏನು ಅವರ ಸಂಸ್ಕೃತಿ ಎಂದು ಕೇಳಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬರುವುದಿಲ್ಲ. ಈಗಾಗಲೇ ಮಾಡಿಸಿರುವ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮೊದಲ ಹಂತದ ಸಮೀಕ್ಷೆ ಈಗಾಗಲೇ ನಾವು ನಡೆಸಿದ್ದೇವೆ. ಎರಡನೇ ಹಂತದ ಸಮೀಕ್ಷೆ ವರದಿ ಜನವರಿಯಲ್ಲಿ ಕೈ ಸೇರಲಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬುದು ಯಡಿಯೂರಪ್ಪ ಅವರ ಭ್ರಮೆ. ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆ ಮಾಡಬೇಡಿ ಎಂದು ಜಿಲ್ಲಾಡಳಿತ ಹೇಳಿರಲಿಲ್ಲ. ಆದರೂ ಬಿಜೆಪಿಯವರು ಅಲ್ಲಿ ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿಸಿದ್ದಾರೆ. ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics