ರಾಜಕೀಯ

ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿಯಿಂದ ಡಿ.18ರಂದು ಸಾಮೂಹಿಕ ಪ್ರತಿಭಟನೆ

Sumana Upadhyaya
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮೇಲೆ ಹೊಸ ವಾಗ್ದಾಳಿಯನ್ನು ನಡೆಸಲು ಯೋಜನೆ ರೂಪಿಸುತ್ತಿರುವ ಬಿಜೆಪಿ, ಆರ್ಎಸ್ಎಸ್, ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆಯ ವಿರುದ್ಧ ಸಾಮೂಹಿಕ ತನಿಖೆ ನಡೆಸಲು ಸಜ್ಜಾಗಿದೆ. 
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಿಂದ ಬಿಜೆಪಿ ಶಾಸಕರು ಮತ್ತು ನಾಯಕರು ನಾಳೆ ರಾಜಭವನಕ್ಕೆ ರಾಜ್ ಭವನ ಚಲೋ ರ್ಯಾಲಿ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿ ಸಲಿದ್ದಾರೆ. ಮನವಿಯಲ್ಲಿ 19 ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದು ಈ ಕುರಿತು ತನಿಖೆ ನಡೆಸಿ ನ್ಯಾಯ ಒದಗಿಸಲು ಸರ್ಕಾರಕ್ಕೆ ಒತ್ತಡ ಹೇರಲು ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಕೋರಲಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಇದನ್ನು ಖಂಡಿಸಿ ಬಿಜೆಪಿ ಇದೇ 18ರಂದು ಹೊನ್ನಾವರದಲ್ಲಿ ಸಾಮೂಹಿಕ ರ್ಯಾಲಿ ನಡೆಸಲಿದ್ದು ಅದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಕೋರ್ ಸಮಿತಿ ಅಂತಿಮ ರೂಪು ರೇಷೆಗಳನ್ನು ಸಿದ್ದಪಡಿಸಿತು.
SCROLL FOR NEXT