ಬಿಎಸ್ ಯಡಿಯೂರಪ್ಪ 
ರಾಜಕೀಯ

ಕಟ್ಟಾ ಹಿಂದೂತ್ವಕ್ಕಾಗಿ ಯಾವುದೇ ಯೋಜನೆ ಅಥವಾ ತಂತ್ರ ರೂಪಿಸಿಲ್ಲ: ಯಡಿಯೂರಪ್ಪ

ಬಿಜೆಪಿ ರಾಜ್ಯಾಧ್ಯಾಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರ ಪರಿವರ್ತನಾ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ....

ಸೇಡಂ: ಬಿಜೆಪಿ ರಾಜ್ಯಾಧ್ಯಾಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರ ಪರಿವರ್ತನಾ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ರಾಜ್ಯ ಸರ್ಕಾರದ ವೈಫಲ್ಯ ಮತ್ತು ಪ್ರಧಾನಿ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವ ಯತ್ನ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಕಟ್ಟಾ ಹಿಂದೂತ್ವವ ವಾದ ಚುನಾವಣೆ ಬಗ್ಗೆ ಪಕ್ಷದಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ವಿಶೇಷ ಸಂದರ್ಶನ ನೀಡಿದ್ದು, ಕಟ್ಟಾ ಹಿಂದೂತ್ವಕ್ಕಾಗಿ ಬಿಜೆಪಿ ಯಾವುದೇ ಯೋಜನೆ ಅಥವಾ ತಂತ್ರ ರೂಪಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಿಮ್ಮ ರ್ಯಾಲಿಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಆದರೆ ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ನಿಮ್ಮ ಶ್ರಮ ವ್ಯರ್ಥವಾಗುತ್ತಿದೆಯೇ?
ಹೌದು, ಚುನಾವಣೆ ವೇಳೆ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇದು ಸಾಮಾನ್ಯ. ಆದರೆ ನಾನು ಆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆ ಬಗ್ಗೆ ಗಮನ ಹರಿಸುತ್ತಾರೆ. ಅದನ್ನು ಹೇಗೆ ತಡೆಯಬೇಕು ಎಂಬುದು ನಮಗೆ ಗೊತ್ತು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಹಲವು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ನಮ್ಮ ಆಂತರಿಕ ಸಮೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನೀವು ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದೀರಿ. ಆದರೆ ನಿಮ್ಮ ನಾಯಕರಾದ ಅನಂತ್ ಕುಮಾರ್ ಹೆಗಡೆ ಮತ್ತು ಪ್ರತಾಪ್ ಸಿಂಹ ಕಟ್ಟಾ ಹಿಂದೂತ್ವವಾದ ಪ್ರಚಾರ ಮಾಡುತ್ತಿದ್ದಾರೆ?
ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗಡೆ ಅವರು ಮೊದಲಿನಿಂದಲೂ ಹಾಗೆ ಇದ್ದಾರೆ. ಆದರೆ ನಾವು ಪ್ರಧಾನಿ ಮೋದಿ ಅವರ ಸಾಧನೆ ಮತ್ತು ಕಲ್ಯಾಣ ಕಾರ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ನನ್ನ ಪ್ರಚಾರದಲ್ಲಿ ಹಿಂದೂಗಳು, ಮುಸ್ಲಿಮ್, ಕ್ರಿಸ್ಚಿಯನ್ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಮಹತ್ವ ನೀಡಲಾಗುತ್ತಿದೆ ಎಂದಿದ್ದಾರೆ.
'ಸಬ್ ಕಾ ಸಾಥ್ ಸಬ್ ಕಾ ವಿಕಾಸ್'ಕ್ಕೆ ನಾವು ಬದ್ಧರಾಗಿದ್ದಾವೆ. ಕಟ್ಟಾ ಹಿಂದೂತ್ವಕ್ಕಾಗಿ ಪಕ್ಷದಲ್ಲಿ ಯಾವುದೇ ಯೋಜನೆ ಅಥವಾ ತಂತ್ರ ರೂಪಿಸಿಲ್ಲ. ನಾನು ಮತ್ತು ನಮ್ಮ ರಾಷ್ಟ್ರೀಯ ನಾಯಕರು ಪ್ರತಾಪ್ ಮತ್ತು ಅನಂತ್ ಕುಮಾರ್ ಹೆಗಡೆ ಜೊತೆ ಮಾತನಾಡಿದ್ದಾರೆ. ಜನರ ತಲೆಯಲ್ಲಿ ಗೊಂದಲ ಸೃಷ್ಟಿಸಬೇಡಿ ಎಂದು ಸೂಚಿಸಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಿಂದ ನಿಮ್ಮ ಲೆಕ್ಕಾಚಾರ ತಲೆಕೇಳಗಾಗುವ ಸಾಧ್ಯತೆ ಇದೆಯೇ?
ಸಾಧ್ಯ ಇಲ್ಲ. ಸ್ವಲ್ಪವೂ ವ್ಯತ್ಯಾಸ ಆಗುವುದಿಲ್ಲ. ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತೆಗೆದುಕೊಳ್ಳವ ನಿರ್ಧಾರವನ್ನು ಬೆಂಬಲಿಸುವುದಾಗಿ ನಾವು ಈಗಾಗಲೇ ಘೋಷಿಸಿದ್ದೇವೆ. ಸಿದ್ಧಗಂಗಾ ಶ್ರೀಗಳು ಸಹ ಪತ್ರದ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಸಂಬಂಧ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ಒಬ್ಬ ಮೂರ್ಖ. ಹುಚ್ಚನಂತೆ ಮಾತನಾಡುತ್ತಿದ್ದಾರೆ ಎಂದು ಬಿಎಸ್ ವೈ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರ ವಿರುದ್ಧ ಹಿರಿಯ ನಾಯಕ ಉಮೇಶ್ ಕತ್ತಿ ಅವರು ನೀಡಿದ ಹೇಳಿಕೆ ಮತ್ತು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವರದಿಗಳಿಂದ ಬಿಜೆಪಿಗೆ ಹಿನ್ನಡೆಯಾಗುವುದಿಲ್ಲವೇ?
ಉಮೇಶ್ ಕತ್ತಿ ಅವರ ಹೇಳಿಕೆ ಸಂಪೂರ್ಣ ವೈಯಕ್ತಿಕ ಮತ್ತು ಅದನ್ನು ತಪ್ಪಾಗಿ ಅರ್ಥೈಯಿಸಲಾಗುತ್ತಿದೆ. ನಾನು ಅವರೊಂದಿಗೆ ಮಾತನಾಡಿದ್ದು, ಅವರು ಬಿಜೆಪಿಯಲ್ಲೇ ಉಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರು ಬಿಜೆಪಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್