ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸೋಲಿನ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಪಕ್ಷದ ಚುನಾವಣಾ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನಿರ್ದೇಶನ ನೀಡಿರುವ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಚುನಾವಣಾ ಕಾರ್ಯತಂತ್ರದ ಬಗ್ಗೆ ಎಚ್ಚರಿಕೆ ವಹಿಸುವಂತೆ ಮತ್ತು ಪಕ್ಷ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಸೋಲಿನ ನಂತರ ಅದಕ್ಕೆ ಕಾರಣಗಳು ಪರಾಮರ್ಶಿಸುವಂತೆ ಸೂಚಿಸಿದ್ದಾರೆ.
ನಿನ್ನೆ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಚೇರಿಯಲ್ಲಿ ಸ್ಥಳೀಯ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಇದೇ 21ರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ವಿಧಾನಗಳ ಕುರಿತು ಚರ್ಚೆ ನಡೆಸಲಾಯಿತು. ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಪಕ್ಷದ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಸೂರತ್, ಅಹ್ಮದಾಬಾದ್ ಗಳಲ್ಲಿ ಉದ್ಯಮಿಗಳು ಮತ್ತು ವ್ಯಾಪಾರಸ್ಥರ ಮೇಲೆ ಬೆದರಿಕೆ, ಒತ್ತಡ ಹಾಕಿ ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡು ಗೆದ್ದರೂ ಸಹ ಕಾಂಗ್ರೆಸ್ ಉತ್ತಮ ಫಲಿತಾಂಶವನ್ನು ಕಂಡಿದೆ. ಈ ಬಾರಿ ಗುಜರಾತ್ ನಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟುಗಳನ್ನು ಗೆದ್ದುಕೊಂಡಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಗುಜರಾತ್ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ವಿಶ್ವಾಸ ನಮಗಿತ್ತು.ಚುನಾವಣೆ ನಡೆದ ರೀತಿ ಮಧ್ಯೆಯೂ ಕಾಂಗ್ರೆಸ್ ತನ್ನ ಮೂಲವನ್ನು ಗುಜರಾತ್ ನಲ್ಲಿ ವಿಸ್ತರಿಸಿಕೊಂಡದ್ದು ಪ್ರಶಂಸನೀಯ. ತನ್ನ ಗುರಿಯ 150 ಸ್ಥಾನಗಳನ್ನು ತಲುಪುವಲ್ಲಿ ಅಲ್ಲಿ ಬಿಜೆಪಿ ವಿಫಲವಾಗಿದೆ ಎಂದರು.
ಪ್ರಜಾಪ್ರಭುತ್ವ ಆಳ್ವಿಕೆಯಲ್ಲಿ ನಾವು ಸೋಲು, ಗೆಲುವು ಎರಡನ್ನೂ ಸ್ವೀಕರಿಸಬೇಕು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳ ಫಲಿತಾಂಶ ಕರ್ನಾಟಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ವಿಶ್ವಾಸವನ್ನು ಕಳೆಗುಂದದಂತೆ ನೋಡಿಕೊಳ್ಳುವ ಪ್ರಯತ್ನವನ್ನು ಶಿವಕುಮಾರ್ ಮಾಡಿದರು. ಕೇಂದ್ರದಲ್ಲಿ ಬೇರೆ ಪಕ್ಷಗಳು ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಈ ಹಿಂದೆ ಅಧಿಕಾರದಲ್ಲಿತ್ತು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿತ್ತು. ಮುಂದಿನ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿರುವುದು ತಪ್ಪಲ್ಲ. ಆದರೆ ಅಧಿಕಾರಕ್ಕೆ ಬರುವುದು ಮಾತ್ರ ಕಾಂಗ್ರೆಸ್ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics