ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯವನ್ನು ಬಿಜೆಪಿ ಲೂಟಿ ಮಾಡಿತ್ತು: ಸಿಎಂ ಸಿದ್ದರಾಮಯ್ಯ

ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ರಾಜ್ಯದ ಸಂಪನ್ಮೂಲಗಳನ್ನು .....

ಹುಬ್ಬಳ್ಳಿ: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡಿದ್ದು, ಬೊಕ್ಕಸವನ್ನು ಖಾಲಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
 ಕಳೆದ ನಾಲ್ಕು ವರ್ಷಗಳಲ್ಲಿ ನೀರಾವರಿ ಯೋಜನೆಗಳಿಗೆ ಖರ್ಚು ಮಾಡಿದ 45,000 ಕೋಟಿ ರೂಪಾಯಿಗಳಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಶೇಕಡಾ 60ರಷ್ಟು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 
ನಿನ್ನೆ ಹುಬ್ಬಳ್ಳಿಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ತಮ್ಮ ಸರ್ಕಾರ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ 26,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದು ಮುಂದಿನ ಮಾರ್ಚ್ ವರೆಗೆ ಹೆಚ್ಚುವರಿ 4 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುವುದು. ನೀರಾವರಿ ಯೋಜನೆಗಳಿಗೆ 50,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುವ ಮೂಲಕ ಜನರಿಗೆ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಪೂರೈಸುತ್ತಿದ್ದು ಉಳಿದ ಹಣವನ್ನು ಮುಂದಿನ ಹಣಕಾಸು ವರ್ಷದೊಳಗೆ ಪೂರೈಸಲಾಗುವುದು ಎಂದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ತಮ್ಮ ಸರ್ಕಾರ ಈಗಾಗಲೇ ಬಹುತೇಕ ಈಡೇರಿಸಿದ್ದು ಚುನಾವಣಾ ಪ್ರಣಾಳಿಕೆಗಳು ಮಾತ್ರವಲ್ಲದೆ ಇತರ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೂಡ ಜಾರಿಗೊಳಿಸಲಾಗಿದೆ. ಮುಂದಿನ ಮಾರ್ಚ್ ಒಳಗೆ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ಎಲ್ಲಾ ಜಾತಿ, ಧರ್ಮದವರಿಗೆ ಸರ್ಕಾರದ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT