ಬೆಂಗಳೂರು: ವಿಜಯಪುರದ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದಕ ಟ್ವೀಟ್ ಗೆ ಸಂಬಂಧಪಟ್ಟಂತೆ ಧೈರ್ಯವಿದ್ದರೆ ತಮ್ಮನ್ನು ಬಂಧಿಸಲಿ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಸಿದ್ದರಾಮಯ್ಯ ಸರ್ಕಾರಕ್ಕೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜಾಮೀನಿಗೆ ಅರ್ಜಿ ಹಾಕುವುದಿಲ್ಲ. ಮಾಧ್ಯಮಗಳಲ್ಲಿ ನೋಡಿ ಮತ್ತು ಕೇಳಿದ ಆಧಾರದ ಮೇಲೆ ನಾನು ಟ್ವೀಟ್ ಮಾಡಿದ್ದೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು.
ನಾನು ಪೊಲೀಸರ ಮುಂದೆ ಈ ಕೇಸನ್ನು ಇಡುತ್ತೇನೆ. ಅವರು ತನಿಖೆ ಮಾಡಲಿ, ಎಂದು ಸವಾಲು ಹಾಕಿದರು.ಪ್ರಚೋದನಕಾರಿ ಹೇಳಿಕೆ ಕುರಿತು ಶೋಭಾ ಕರಂದ್ಲಾಜೆ ವಿರುದ್ಧ ಪೊಲೀಸರು ಕೇಸು ಹಾಕಿದ್ದಾರೆ.
ಪೊಲೀಸರಿಗೆ ಮಾಹಿತಿ ನೀಡಿದರೂ ಕೂಡ ಸರ್ಕಾರ ಆರೋಪಿಗಳನ್ನು ಬಂಧಿಸಿಲ್ಲ, ಬದಲಾಗಿ ತಮ್ಮ ವಿರುದ್ಧ ಕೇಸು ಹಾಕಿದ್ದಾರೆ ಎಂದು ಕರಂದ್ಲಾಜೆ ಹೇಳಿದರು.ತಮ್ಮ ವಿರುದ್ಧ ಹಾಕಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದರು.
ಅವರು ಇಂದು ವಿಜಯಪುರದಲ್ಲಿ ಮೃತ ಬಾಲಕಿಯ ಮನೆಗೆ ಭೇಟಿ ನೀಡಿ ದಾನಮ್ಮ ಮತ್ತು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಆರೋಪಿಗಳನ್ನು ಕೂಡಲೇ ಬಂಧಿಸಿ ಬಾಲಕಿಯ ಕುಟುಂಬ ಸದಸ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics