ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 
ರಾಜಕೀಯ

ಕರ್ನಾಟಕದಿಂದ ಕಾಂಗ್ರೆಸ್ ನ್ನು ಕಿತ್ತೊಗೆಯಿರಿ: ಶಿವರಾಜ್ ಸಿಂಗ್ ಚೌಹಾಣ್

ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ...

ಹಾವೇರಿ: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜನತೆಗೆ ಕರೆ ನೀಡಿದ್ದಾರೆ.
ಹಾವೇರಿಯ ಶಿವಲಿಂಗೇಶ್ವರ ಮಹಿಳಾ ಕಾಲೇಜು ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿಯೇ ಅತ್ಯಂತ ಭ್ರಷ್ಟವಾಗಿದ್ದು ಕರ್ನಾಟಕದಿಂದ ಕಾಂಗ್ರೆಸ್ ನ್ನು ಕಿತ್ತೊಗೆಯಬೇಕು. 17 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ಈಗಾಗಲೇ ಅಧಿಕಾರದಿಂದ ಕೆಳಗಿಳಿಸಿದ್ದಾರೆ ಎಂದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಮುಖ್ಯಮಂತ್ರಿಗಳು ಪರೋಕ್ಷವಾಗಿ ಹಣಕಾಸಿನ ನೆರವು ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಇಂದು ಕಾನೂನು, ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು 20ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಆದರೆ ಆರೋಪಿಗಳನ್ನು ಹಿಡಿಯುವಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕರ್ನಾಟಕದ ಬೆಳವಣಿಗೆಗೆ ಪ್ರಧಾನಿ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ. ಆದರೆ ಸರ್ಕಾರ ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಕರ್ನಾಟಕದ ಜನತೆ ಬದಲಾವಣೆಗಾಗಿ ಕಾಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಜನರು ಮಾನಸಿಕವಾಗಿ ಈಗಾಗಲೇ ಸಿದ್ಧವಾಗಿದ್ದಾರೆ. ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಜನರು ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಜನರು ಹತಾಶೆಯಿಂದ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಚೌಹಾಣ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್