ಸಿದ್ದರಾಮಯ್ಯ 
ರಾಜಕೀಯ

ಮಹದಾಯಿ ವಿವಾದ ಇತ್ಯಾರ್ಥಪಡಿಸಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು: ಸಿಎಂ ಆಗ್ರಹ

ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ನದಿ ನೀರಿನ ವಿವಾದ ಇತ್ಯರ್ಥಪಡಿಸಲು ಪ್ರಧಾನಿ....

ಹುಬ್ಬಳ್ಳಿ: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ನದಿ ನೀರಿನ ವಿವಾದ ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮತ್ತೆ ಒತ್ತಾಯಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮಾತುಕತೆಗಾಗಿ ತಮಗೆ ಪತ್ರ ಬರೆಯುವ ಬದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆಯುವ ಮೂಲಕ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆಯೂ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಿದ್ದ ಸಿಎಂ ಈಗ ಮತ್ತೆ ಮಹದಾಯಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲೇಬೇಕು ಎಂದು ಒತ್ತಾಯಿಸಿದ್ದಾರೆ.
ಪರಿಕ್ಕರ್ ಅವರು ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವುದರಿಂದ ಅದಕ್ಕೆ ಯಾವುದೇ ಕಾನೂನಿನ ಮಾನ್ಯತೆ ಇಲ್ಲ. ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಕೇಂದ್ರ ಸರ್ಕಾರ ರಾಜಕೀಯ ನಾಟಕವಾಡುತ್ತಿವೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಅವರು ಸಿಎಂ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ಘೋಷಿಸಬೇಕು ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಅವರೇನು ಚುನಾವಣಾ ಅಧಿಕಾರಿಯೇ? ನಮಗೆ ಐದು ವರ್ಷ ಜನಾದೇಶ ಇದೆ. ಬಿಜೆಪಿ ಮೇ ನಲ್ಲಿ ಚುನಾವಣೆ ಎದುರಿಸಲಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video