ರಾಜಕೀಯ

ಸಂವಿಧಾನ ಬದಲಾಯಿಸಲು ಅನಂತಕುಮಾರ್ ಹೆಗಡೆ ಯಾರು?: ರಾಯರೆಡ್ಡಿ

Lingaraj Badiger
ಕೊಪ್ಪಳ: ಸಂವಿಧಾನ ಬದಲಾವಣೆ ಮಾಡಬೇಕು ಎಂದು ವಿವಾದಾತ್ಮ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದು, ಸಂವಿಧಾನ ಬದಲಾಯಿಸಲು ಹೆಗಡೆ ಯಾರು? ಎಂದು ಪ್ರಶ್ನಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಯರೆಡ್ಡಿ ಅವರು, ಅನಂತಕುಮಾರ್ ಹೆಗಡೆ ಅವರು ಕೇಂದ್ರದ ಮಂತ್ರಿಯಾಗಿ ಸಂವಿಧಾನದಡಿಯಲ್ಲಿಯೇ ಪ್ರಮಾಣವಚನ ಸ್ವೀಕರಿಸಿ, ಈಗ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂಬ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.
ಅನಂತಕುಮಾರ್ ಹೆಗಡೆ ಕೇಂದ್ರ ಸಚಿವರಾಗಿ ಮುಂದುವರಿಯಲು ಅನರ್ಹರು ಎಂದಿರುವ ರಾಯರೆಡ್ಡಿ ಅವರು, ದೇಶದಲ್ಲಿ ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಪ್ರತಿಪಾದಿಸಿದ್ದಾರೆ.
ಅನಂತಕುಮಾರ್ ಹೆಗಡೆ ಕೆಳಸ್ತರದ ಸಮುದಾಯದಲ್ಲಿ ಹುಟ್ಟಿದ್ದರೆ ಅವರ ನೋವು, ಕಷ್ಟ ಗೊತ್ತಾಗುತ್ತಿತ್ತು. ಮನುವಾದವನ್ನು ಮತ್ತೆ ತರಲು ಹವಣಿಸಲಾಗುತ್ತಿದೆ, ಸಂವಿಧಾನವನ್ನು ಯಾರೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದ್ದಾರೆ.
SCROLL FOR NEXT