ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬ ಊಹಾಪೋಹಗಳಿಗೆ ತೆರೆಎಳೆದಿರುವ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಬೇರಾವುದೇ ಕ್ಷೇತ್ರದಿಂದಲೂ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣೆಯಲ್ಲಿ ನಾನು ಗೆಲ್ಲುವ 20 ಕ್ಷೇತ್ರಗಳಿವೆ. ಆದರೆ, ಚಾಮುಂಡೇಶ್ವರಿ ಕ್ಷೇತ್ರ ರಾಜಕೀಯದಲ್ಲಿ ನನಗೆ ಶಕ್ತಿ ಹಾಗೂ ಮರುಹುಟ್ಟು ನೀಡಿದ್ದರಿಂದಾಗಿ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯಲು ನಿರ್ಧರಿಸಿದ್ದೇನೆಂದು ತಿಳಿಸಿದ್ದಾರೆ.