ರಾಜಕೀಯ

ನಂಜನಗೂಡು ಉಪಚುನಾವಣೆಯಲ್ಲಿ ಸೋತರೆ ರಾಜಕೀಯದಿಂದ ನಿವೃತ್ತಿ: ಶ್ರೀನಿವಾಸ್ ಪ್ರಸಾದ್

Shilpa D

ಮೈಸೂರು: ನಂಜನಗೂಡು ವಿಧಾನಸಭೆ ಉಪಚುನಾವಣೆಯಲ್ಲಿ ನಾನು ಸೋತರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ, ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಲಿ ಎಂದು  ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

ನಂಜನಗೂಡು ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಯಾವಾಗ ಬೇಕಾದರೂ ಚುನಾವಣೆ ಅಧಿಸೂಚನೆ ಹೊರಡಿಸಲಿದೆ, ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದಾರೆ.

ಮೈಸೂರಿನ ಸಿಂಧುವನಹಳ್ಳಿಯಲ್ಲಿ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. ನನ್ನನ್ನು ಸೋಲಿಸುವುದೇ ಸಿದ್ದರಾಮಯ್ಯ ಅವರ ಪ್ರಮುಖ ಅಜೆಂಡವಾಗಿದೆ. ಹೀಗಾಗಿ ನನ್ನ ವಿರುದ್ಧ ಕೆಲಸ ಮಾಡಲು ಸಂಪುಟ ಸಹೋದ್ಯೋಗಿಗಳಿಗೆಲ್ಲಾ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ತನ್ವೀರ್ ಸೇಠ್, ರಮೇಶ್ ಜಾರಕಿಹೊಳಿ ಹಾಗೂ ಎಚ್,ವೈ ಮೇಟಿ ಅವರನ್ನು ಕರೆತರಲಿ ನನಗೆ ಭಯವಿಲ್ಲ ಎಂದು ಪ್ರಸಾದ್ ಹೇಳಿದ್ದಾರೆ. ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕುವ ವ್ಯಕ್ತಿ ಎಂದು ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಪ್ರಾಮಾಣಿಕ ಹಾಗೂ ಹಿರಿಯ ನಾಯಕರು ಬೇಕಾಗಿಲ್ಲ, ಅವರಿಗೆ ಭ್ರಷ್ಟ ಜನಕು ಬೇಕು ಎಂದು ಕಿಡಿಕಾರಿದ್ದಾರೆ.

SCROLL FOR NEXT