ರಾಜಕೀಯ

ಕಾಂಗ್ರೆಸ್ ಸೇರಿದ ಕಳಲೆ ಕೇಶವಮೂರ್ತಿ: ನಂಜನಗೂಡು ಉಪ ಚುನಾವಣೆಯಲ್ಲಿ ಸ್ಪರ್ಧೆ

Shilpa D

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ನಂಜನಗೂಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಳಲೆ ಕೇಶವಮೂರ್ತಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕೇಶವಮೂರ್ತಿ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಿದ ಪರಮೇಶ್ವರ್‌ ನಂಜನಗೂಡು ಉಪ ಚುನಾವಣೆಯಲ್ಲಿ ಕೇಶವಮೂರ್ತಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೇಶವಮೂರ್ತಿ ಪರಾಭವಗೊಂಡಿದ್ದರು. ಈಗ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆಯಾದ್ದರಿಂದ ಕೇಶವಮೂರ್ತಿ ನಂಜನಗೂಡಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಲೋಕೋಪಯೋಗಿ ಸಚಿವ ಎಚ್ ಸಿ ಮಹಾದೇವಪ್ಪ ಅವರ ಪುಚತ್ರ ಸುನೀಲ್ ಬೋಸ್ ಅವರನ್ನು ಕಣಕ್ಕಿಳಿಸುವಂತೆ ಮಹಾದೇವಪ್ಪ ಬೆಂಬಲಿಗರು ಒತ್ತಡ ಹೇರಿದ್ದರು. ಕೇಶವಮೂರ್ತಿ ಅವರನ್ನು ನಂಜನಗೂಡು ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿಸಿದರೇ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಿರಲು ಬೆಂಬಲಿಗರು ನಿರ್ಧರಿಸಿದ್ದಾರೆ.

SCROLL FOR NEXT