ಜಗದೀಶ್ ಶೆಟ್ಟರ್ 
ರಾಜಕೀಯ

'ಕೈ'ಕಮಾಂಡ್‌ಗೆ ಕಪ್ಪ: ಸಿಎಂ ಸಿದ್ದರಾಮಯ್ಯ, ಸಚಿವರ ರಾಜಿನಾಮೆಗೆ ಶೆಟ್ಟರ್‌ ಆಗ್ರಹ

ರಾಜ್ಯ ಸರ್ಕಾರದ ಸಚಿವರು ಕಾಂಗ್ರೆಸ್‌ ಹೈಕಮಾಂಡ್‌ಗೆ ನೂರಾರು ಕೋಟಿ ರುಪಾಯಿ ಕಪ್ಪ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ....

ಹುಬ್ಬಳ್ಳಿ: ರಾಜ್ಯ ಸರ್ಕಾರದ ಸಚಿವರು ಕಾಂಗ್ರೆಸ್‌ ಹೈಕಮಾಂಡ್‌ಗೆ ನೂರಾರು ಕೋಟಿ ರುಪಾಯಿ ಕಪ್ಪ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಸಚಿವರು ನೈತಿಕ ಹೊಣೆ ಹೊತ್ತು  ರಾಜಿನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಮುಖ್ಯಮಂತ್ರಿಗಳ ಆಪ್ತ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಸಿಕ್ಕ ದಿನಚರಿ ಪುಸ್ತಕದಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಕೋಟಿಗಟ್ಟಲೆ ಹಣ ಕೊಟ್ಟಿರುವ ಅಂಶಗಳು ಉಲ್ಲೇಖವಾಗಿವೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಪಡಿಸಿದರು.
ರಾಜ್ಯ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಹೊಂದಿರುವ ಸಚಿವರೇ ಹೆಚ್ಚಾಗಿ ಹಣ ಕೊಟ್ಟಿದ್ದಾರೆ. ಆ ಮೂಲಕ ರಾಜ್ಯದ ಸಂಪತ್ತು ಕೊಳ್ಳೆ ಹೊಡೆದು ಹೈಕಮಾಂಡ್‌ಗೆ ಧಾರೆ ಎರೆದಿದ್ದಾರೆ. ಹೀಗಾಗಿ ಡೈರಿಯಲ್ಲಿ ಹೆಸರು ಪ್ರಸ್ತಾಪವಾಗಿರುವ ಎಲ್ಲಾ ಸಚಿವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು ಎಂದು ಶೆಟ್ಟರ್ ಒತ್ತಾಯಿಸಿದ್ದಾರೆ.
ಇನ್ನು ತಮ್ಮ ಮನೆಯಲ್ಲಿ ಡೈರಿ ಸಿಕ್ಕೇ ಇಲ್ಲ. ಇಷ್ಟಕ್ಕೂ ಅದು ತಮ್ಮ ಹಸ್ತಾಕ್ಷರ ಅಲ್ಲ ಎಂದು ಗೋವಿಂದರಾಜು ವಾದ ಮಾಡುತ್ತಿದ್ದಾರೆ. ಹೀಗಾಗಿ ಸತ್ಯ ಹೊರಬರಲು ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದರು. ಹಣ ಕೊಟ್ಟವರು ಮತ್ತು ಅದನ್ನು ಪಡೆದವರು ಬೇರೆ ಬೇರೆ ರಾಜ್ಯಗಳಲ್ಲಿನ ಜನರಾಗಿರುವ ಕಾರಣ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ