ಸಂಗ್ರಹ ಚಿತ್ರ 
ರಾಜಕೀಯ

ಜೆಡಿಎಸ್ ಶಾಸಕ ಪಿಳ್ಳ ಮುನಿಶಾಮಪ್ಪ ಯೂಟರ್ನ್; ರಾಜಿನಾಮೆ ವಾಪಸ್!

ಎಚ್ ಡಿ ಕುಮಾರ ಸ್ವಾಮಿ ಅವರ ವಿರುದ್ಧ ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ರಾಜಿನಾಮೆ ನೀಡಿದ ಕೇವಲ 24 ಗಂಟೆಗಳಲ್ಲಿಯೇ ಯೂಟರ್ನ್ ಹೊಡೆದಿದ್ದು, ರಾಜೀನಾಮೆ ವಾಪಾಸ್‌ ಪಡೆದಿದ್ದಾರೆ.

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಅವರ ವಿರುದ್ಧ ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ರಾಜಿನಾಮೆ ನೀಡಿದ ಕೇವಲ 24  ಗಂಟೆಗಳಲ್ಲಿಯೇ ಯೂಟರ್ನ್ ಹೊಡೆದಿದ್ದು, ರಾಜೀನಾಮೆ ವಾಪಾಸ್‌ ಪಡೆದಿದ್ದಾರೆ.

ಶಾಸಕ ಪಿಳ್ಳ ಮುನಿಶಾಮಪ್ಪ ರಾಜಿನಾಮೆ ನೀಡಿದ ವಿಚಾರ ತಿಳಿಯುತ್ತಿದ್ದಂತೆಯೇ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಶಾಸಕರನ್ನು ಓಲೈಸುವ ಯತ್ನ ನಡೆಸಿದ್ದರು. ಸತತ ಮಾತುಕತೆ ಬಳಿಕ ದೇವೇಗೌಡ ಅವರ  ಸಂಧಾನಕ್ಕೆ ಒಪ್ಪಿಗೆ ನೀಡಿದ ಪಿಳ್ಳ ಮುನಿಶಾಮಪ್ಪ ಅವರು ಇಂದು ಸ್ಪೀಕರ್‌ ಕೋಳಿವಾಡ ಅವರ ನಿವಾಸಕ್ಕೆ ತೆರಳಿ ತಮ್ಮ ರಾಜೀನಾಮೆ ವಾಪಾಸ್‌ ಪಡೆದಿದ್ದಾರೆ.

ಇನ್ನು ನಿನ್ನೆ ಸ್ಪೀಕರ್‌ ಕೋಳಿವಾಡ್‌ ನಿವಾಸಕ್ಕೆ ಭೇಟಿ ನೀಡಿದ್ದ ಪಿಳ್ಳ ಮುನಿಶಾಮಪ್ಪ ಅವರು ರಾಜೀನಾಮೆ ಪತ್ರ ಸಲ್ಲಿಸಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಅಲ್ಲದೆ ರಾಜಿನಾಮೆ ಪತ್ರದಲ್ಲಿ ಜೆಡಿಎಸ್‌  ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿಯವರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದರು. ದೇವನಹಳ್ಳಿ ಕ್ಷೇತ್ರದ ಸ್ಥಳೀಯ ಮುಖಂಡ ನಿಸರ್ಗ ನಾರಾಯಣಸ್ವಾಮಿ ಅವರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಂಡಿರುವುದು ಹಾಗೂ  ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್‌ ನೀಡುವ ಒಪ್ಪಂದ ಆಗಿರುವುದು ಪಿಳ್ಳಮುನಿಶಾಮಪ್ಪ ಅವರ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುನಿಶಾಮಪ್ಪ ಅವರು, "ಹಿಂದಿನಿಂದಲೂ ನಾನು ಪಕ್ಷಕ್ಕಾಗಿ ದುಡಿದದಿದ್ದೇನೆ. ಆದರೆ ನನ್ನ ಮಾತಿಗೆ ಬೆಲೆ ಇಲ್ಲದಾಗ ಬೇಸರವಾಗಿತ್ತು. ನಾನು ಕ್ಷೇತ್ರದ ಜನರಿಂದ ನೇರವಾಗಿ ಆಯ್ಕೆಯಾಗಿದ್ದು, 5  ವರ್ಷ ಕ್ಷೇತ್ರದಲ್ಲಿ ಕೆಲಸ ಮಾಡಬೇಕಾಗಿದೆ. ಆದರೆ ವರಿಷ್ಠರು ಎಲ್ಲವನ್ನೂ ಸರಿ ಮಾಡಿದ್ದಾರೆ. ಹೀಗಾಗಿ ರಾಜಿನಾಮೆ ವಾಪಸ್ ಪಡೆದಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!