ಬೆಂಗಳೂರು: ಉತ್ತರ ಕನ್ನಡದ ಪ್ರಭಾವಿ ಕಾಂಗ್ರೆಸ್ ಮುಖಂಡ ಪ್ರಮೋದಾ ಹೆಗಡೆ ಮತ್ತು ಜೆಡಿಎಸ್ ಮಾಜಿ ಶಾಸಕ ದಿನಕರ್ ಶೆಟ್ಟಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಸಿದ್ದರಾಮಯ್ಯ ಸಂಪುಟದಿಂದ ಕೈಬಿಟ್ಟ ನಂತರ ಸಿಎಂ ವಿರುದ್ಧ ಮುನಿಸಿಕೊಂಡು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿದ್ದ ಬಿಜೆಪಿ ಸೇರಿದ್ದಾರೆ. ಇವರುಗಳ ಜೊತೆಗೆ ಕಾಂಗ್ರೆಸ್ ನ ಕುಮಾರ್ ಬಂಗಾರಪ್ಪ, ಜೆಡಿಎಸ್ ನ ಪರಿಮಳ ನಾಗಪ್ಪ ಹಾಗೂ ಕಾಂಗ್ರೆಸ್ ಮಾಜಿ ಶಾಸಕ ಜೆ.ಡಿ ನಾಯಕ್ ಕೂಡ ಕೇಸರಿ ಪಕ್ಷ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ.
ದಿನಕರ್ ಶೆಟ್ಟಿ ಮತ್ತು ಪ್ರಮೋದ್ ಹೆಗಡೆ ಬಿಜೆಪಿ ಸೇರ್ಪಡೆಗೊಂಡ ನಂತರ ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಸಾಮರ್ಥ್ಯ ಹೆಚ್ಚಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಜನ ನಿರ್ಧರಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.