ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಇಬ್ರಾಹಿಂ 
ರಾಜಕೀಯ

ಗಟ್ಟಿಯಾದ ಬಿರಿಯಾನಿ ಬಾಂಡಿಂಗ್: ಕಾಂಗ್ರೆಸ್ ತೊರೆಯದಂತೆ ಇಬ್ರಾಹಿಂ ಮನವೊಲಿಸಿದ ಸಿಎಂ

ಕಾಂಗ್ರೆಸ್‌ ತೊರೆಯದಂತೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ...

ಬೆಂಗಳೂರು: ಕಾಂಗ್ರೆಸ್‌ ತೊರೆಯದಂತೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಇಬ್ರಾಹಿಂ ಅವರ ಮನೆಗೆ ಮಧ್ಯಾಹ್ನ ಭೇಟಿ ನೀಡಿದ್ದ ಸಿದ್ದರಾಮಯ್ಯ ಸುಮಾರು ಎರಡು ಗಂಟೆ ಮಾತುಕತೆ ನಡೆಸಿದರು. ಅನಂತರ ಬಿರಿಯಾನಿ ಸವಿದು ಅಲ್ಲಿಂದ ಹೊರಟರು. ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಇಬ್ರಾಹಿಂ ಅವರ ಮಕ್ಕಳು ದುಬೈ ನಲ್ಲಿ ಇರುತ್ತಾರೆ, ಹೀಗಾಗಿ ಪ್ರತಿ ಹೊಸ ವರ್ಷದಂದು ಅವರ ಮನೆಯಲ್ಲಿ ಊಟ ಮಾಡುತ್ತೇನೆ. ಇವತ್ತೂ ಸಹ ಊಟಕ್ಕೆ ಬನ್ನಿ ಎಂದು ಕರೆದಿದ್ದರು. ಅದಕ್ಕಾಗಿ ಬಂದಿದ್ದೇನೆ. ‘ನನ್ನ ಮತ್ತು ಇಬ್ರಾಹಿಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರಎಂದು ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಇಬ್ರಾಹಿಂ ಅವರು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಹೋಗುವುದಿಲ್ಲ. ಅವರು ನನಗೆ ಒಳ್ಳೆಯ ಸ್ನೇಹಿತರು. ಕಾಂಗ್ರೆಸ್‌ ಏಕೆ ಬಿಡುತ್ತಾರೆ?  ಎಂದು ಸಿದ್ದರಾಮಯ್ಯ  ಅವರು ಪ್ರಶ್ನಿಸಿದರು.

ಎಚ್‌. ಡಿ ದೇವೇಗೌಡರು ನನಗೆ ತಂದೆ ಸಮಾನರು. ಆದರೆ, ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಸಿ.ಎಂ.ಇಬ್ರಾಹಿಂ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video