ಎಚ್.ಡಿ ದೇವೇಗೌಡ 
ರಾಜಕೀಯ

ನನ್ನ ಸ್ನೇಹಿತ ಇಬ್ರಾಹಿಂ ನಂಬಿಕೆ ಕಳೆದುಕೊಂಡು ಹತಾಶರಾಗಿದ್ದಾರೆ: ದೇವೇಗೌಡ

ನನ್ನ ಸ್ನೇಹಿತ ಸಿಎಂ ಇಬ್ರಾಹಿಂ ಇತ್ತೀಚಿನ ದಿನಗಳಲ್ಲಿ ನಿರಾಶರಾಗಿದ್ದಾರೆ, ಹತಾಶರಾಗಿ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

ಮೈಸೂರು: ನನ್ನ ಸ್ನೇಹಿತ ಸಿಎಂ ಇಬ್ರಾಹಿಂ ಇತ್ತೀಚಿನ ದಿನಗಳಲ್ಲಿ ನಿರಾಶರಾಗಿದ್ದಾರೆ, ಹತಾಶರಾಗಿ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ ಉಪಕುಲಪತಿ ಕೆ.ಎಸ್ ರಂಗಪ್ಪ ಅವರ ಬೀಳ್ಕೋಡುಗೆ ಸಮಾರಂಭದಲ್ಲಿ ದೇವೇಗೌಡ ಭಾಗವಹಿಸಿದ್ದರು. ಇಬ್ರಾಹಿಂ ಅವರು, ದಶಕದ ಹಿಂದೆ ಸಿದ್ದರಾಮಯ್ಯ ಅವರ ಜೊತೆ ಇಬ್ರಾಹಿಂ ಜೆಡಿಎಸ್ ತೊರೆದಿದ್ದರು.

ಅದಾದ ನಂತರ ಇದೇ ಮೊದಲ ಬಾರಿಗೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿರುವ ಇಬ್ರಾಹಿಂ ನನ್ನ ಜೊತೆ ವೇದಿಕೆ ಹಂಚಿಕೊಂಡಿರುವುದು ಅವರು ಜೆಡಿಎಸ್ ಗೆ ಮರಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತಿದೆ ಎಂದು ದೇವೇಗೌಡ ಹೇಳಿದರು. ತೀವ್ರ ಅಸಂತೋಷಗೊಂಡಿರುವ ಇಬ್ರಾಹಿಂ ತಮಗೆ ಉತ್ತಮವಾದದ್ದು ಯಾವುದು ಎಂದು ತಿಳಿದುಕೊಂಡು ಅದನ್ನು ಆರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನೂ ಮೈಸೂರು ವಿವಿ ಕುಲಪತಿ ರಂಗಪ್ಪ ಅವರ ಬಗ್ಗೆ ಮಾತನಾಡಿದ ದೇವೇಗೌಡ ರಂಗಪ್ಪ ಅವರ  ವ್ಯಕ್ತಿತ್ವಕ್ಕೆ ಧಕ್ಕೆ ತರಲು ಕೆಲವರು ಅವರ ವಿರುದ್ಧ ಪಿತೂರಿ ಮಾಡಿದರು, ಅವರ ವಿರುದ್ಧ ಮಾತನಾಡುವವರು ಒಮ್ಮೆ ಮೈಸೂರು ವಿವಿ ಕ್ಯಾಂಪಸ್ ಮತ್ತು ಮುಕ್ತ ವಿವಿ ಸುತ್ತಾಡಿದರೇ ರಂಗಪ್ಪ ಅವರ ದೂರದೃಷ್ಟಿ ಎಂಥಹದ್ದು ಎಂಬುದು ತಿಳಿಯುತ್ತದೆ ಎಂದು ಹೇಳಿದರು.

ತೀರಾ ಬಡ ಕುಟುಂಬದಿಂದ ಬಂದ ರಂಗಪ್ಪ ಅವರು, ಅತ್ಯದ್ಭುತವಾದ ಸಾಧನೆ ಮಾಡಿದ್ದಾರೆ. ಹೀಗಾಗಿ ಮುಂದೆಯು ವೈಜ್ಞಾನಿಕ ಕ್ಷೇತ್ರದಲ್ಲಿ ತಮ್ಮ ಸಂಶೋಧನೆ ಮುಂದುವರಿಸಬೇಕು ಎಂದು ಅವರು ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel