ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಷಯ ಸುಳ್ಳು ಎಂದು ನಾನು ಹೇಳುವುದಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡುವ ಮೂಲಕ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರನ್ನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆಂಬ ವರದಿ ಕುರಿತು ಕೇಳಿದ ಪ್ರಶ್ನೆಗೆ, ಹೌದು ವರದಿ ನೋಡಿದ್ದೇನೆ, ಆದರೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂಬ ವರದಿ ಸುಳ್ಳು ಎಂದು ಹೇಳಲ್ಲ ಎಂದು ಸ್ಪಷ್ಟಪಡಿಸಿದರು.
ಲಿಂಗಾಯತ ಸಮುದಾಯ ಪ್ರಭಾವಿ ಮುಖಂಡರಾದ ಸೋಮಣ್ಣ ಅವರನ್ನು ಕಾಂಗ್ರೆಸ್‍ನತ್ತ ಸೆಳೆಯಲು ಮುಖ್ಯಮಂತ್ರಿ ತೆರೆಮರೆ ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದರು. ಮುಂಬರುವ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಉಪಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸೋಮಣ್ಣ ಅವರು ಕಾಂಗ್ರೆಸ್‍ಗೆ ಸೇರಿದರೆ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಸೋಮಣ್ಣ ಅವರಿಗೆ ಗಾಳ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಲ್ಲಿ ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಸೋಮಣ್ಣ ಕಾಂಗ್ರೆಸ್ ಸೇರಲು ಬಯಸಿದ್ದಾರೆ ಎನ್ನಲಾಗುತ್ತಿದೆ.