ಸಿಎಂ ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರವೇ ಐಟಿ ದಾಳಿ ಏಕೆ: ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರವೇ ತೆರಿಗೆ ಇಲಾಖೆ ದಾಳಿ ಮತ್ತು ಬಂಧನಗಳು ನಡೆಯುತ್ತಿವೆ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ...

ಬೆಂಗಳೂರು: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರವೇ ತೆರಿಗೆ ಇಲಾಖೆ ದಾಳಿ ಮತ್ತು ಬಂಧನಗಳು ನಡೆಯುತ್ತಿವೆ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಆಯೋಜಿಸಿದ್ದ ಜನ ವೇದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇವಲ ಕರ್ನಾಟಕ, ತಮಿಳುನಾಡನ್ನು ಮಾತ್ರ ಏಕೆ ಗುರಿಯಾಗಿಸಿಕೊಳ್ಳಲಾಗಿದೆ.  ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನಗಳಲ್ಲಿ ಕಪ್ಪು ಹಣವಿಲ್ಲವೆ? ಅಲ್ಲಿ ಏಕೆ ಆದಾಯ ತೆರಿಗೆ ದಾಳಿ ನಡೆಯುತ್ತಿಲ್ಲ. ಅದರಲ್ಲೂ ರಾಜಕೀಯ ಪ್ರೇರಿತ ದಾಳಿಗಳು ನಡೆಯುತ್ತಿರುವುದು ಖಂಡನೀಯ ಎಂದರು.

ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಹಾಗಿದ್ದರೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ,ಮಾಜಿ ಡಿಸಿಎಂ ಈಶ್ವರಪ್ಪ, ಕಟ್ಟಾ ಸುಬ್ರಮಣ್ಯನಾಯ್ಡು ಮತ್ತು ಜನಾರ್ದನ ರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪಗಳಿದ್ದವು, ಅದರಲ್ಲಿ ಕೆಲವು ನಾಯಕರು ಜೈಲುವಾಸ ಕೂಡ ಅನುಭವಿಸಿ ಬಂದಿದ್ದಾರೆ. ಇದು ಅಮಿತ್ ಶಾ ಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿ, 75 ವರ್ಷದ ಆರ್ಥಿಕ ವ್ಯವಸ್ಥೆಯನ್ನು ಕೇವಲ 50 ದಿನಗಳಲ್ಲಿ ಬದಲಾಯಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗಿದ್ದರೇ ದೇಶದಲ್ಲಿ ಎಷ್ಟು ಕಪ್ಪು ಹಣವಿದೆ, ಭಯೋತ್ಪಾದಕರ ಬಳಿ ಎಷ್ಟು ಹಣವಿದೆ ಎಂಬುದಕ್ಕೆ ವಿವರಣೆ ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ