ಪ್ರಕಾಶ್ ಹುಕ್ಕೇರಿ 
ರಾಜಕೀಯ

ಎಸ್ಎಂ.ಕೃಷ್ಣ ಬಳಿಕ, 'ಕೈ' ಬಿಡುವ ಎಚ್ಚರಿಕೆ ನೀಡಿದ ಪ್ರಕಾಶ್ ಹುಕ್ಕೇರಿ

ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಂಸದ ಪ್ರಕಾಶ್ ಹುಕ್ಕೇರಿಯವರು 'ಕೈ' ಪಕ್ಷ ಬಿಡುವ ಎಚ್ಚರಿಕೆಯನ್ನು...

ಬೆಳಗಾವಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಂಸದ ಪ್ರಕಾಶ್ ಹುಕ್ಕೇರಿಯವರು 'ಕೈ' ಪಕ್ಷ ಬಿಡುವ ಎಚ್ಚರಿಕೆಯನ್ನು ನೀಡಿದ್ದಾರೆ.

ಎಸ್ಎಂ. ಕೃಷ್ಣ ಅವರು ಕಾಂಗ್ರೆಸ್ ತೊರೆದಿರುವ ಹಿನ್ನಲೆಯಲ್ಲಿ ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೃಷ್ಣಾ ಅವರಿಗೆ ನಾನು ಕಟ್ಟಾ ಬೆಂಬಲಿನಾಗಿದ್ದೇನೆ. ಕಷ್ಣಾ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯದಿದ್ದರೆ, ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತೇನೆಂದು ಹೇಳಿದ್ದಾರೆ.

ಇದು ಹೀಗೆಯೇ ಮುಂದುವರೆಯಲಿದೆ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೃಷ್ಣಾ ಅವರು ರಾಜ್ಯದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸಿದ್ದರು. ಕರ್ನಾಟಕದಲ್ಲಿರುವ ಕಾಂಗ್ರೆಸ್ ಕುಟುಂಬಕ್ಕೆ ಉತ್ತಮ ಮಾರ್ಗದರ್ಶಕರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ವಿಚಾರ ತಿಳಿಯುತ್ತಿದ್ದಂತೆ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆ. ಆದರೆ, ಮಾತನಾಡಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲಿಯೇ ಅವರನ್ನು ಭೇಟಿಯಾಗಿ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುವ ಪ್ರಯತ್ನ ಮಾಡುತ್ತೇನೆ.

ಒಂದು ವೇಳೆ ಕೃಷ್ಣಾ ಅವರ ಮನವೊಲಿಸುವಲ್ಲಿ ವಿಫಲನಾಗಿದ್ದೇ ಆದರೆ, ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಎಸ್ಎಂ. ಕೃಷ್ಣ ಅವರ ಸೇವೆ ರಾಜ್ಯಕ್ಕೆ ಹಾಗೂ ದೇಶಕ್ಕೆ ಅಗತ್ಯವಿದೆ. ಒಂದು ವೇಳೆ ಕೃಷ್ಣ ಅವರು ತಮ್ಮ ನಿಲುವಿನಿಂದ ಹೊರಬರದಿದ್ದರೂ, ಕೂಡ ಅವರನ್ನು ನಾವು ಹಿಂಬಾಲಿಸುತ್ತೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video