ಕೆಪಿ ನಂಜುಂಡಿ 
ರಾಜಕೀಯ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೆ.ಪಿ.ನಂಜುಂಡಿ ನೇಮಕ

ವಿಧಾನ ಪರಿಷತ್‌ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಇತ್ತೀಚಿಗೆ ಕಾಂಗ್ರೆಸ್‌ ತೊರೆದು ಬಿಜೆಪಿ....

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಇತ್ತೀಚಿಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಉದ್ಯಮಿ ಹಾಗೂ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ. ನಂಜುಂಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಕರ್ಮ ಸಮೂದಾಯದ ಮುಖಂಡ ನಂಜುಂಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ.
ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂಜುಂಡಿಯವರಿಗೆ ಉಪಾಧ್ಯಕ್ಷ ಸ್ಥಾನ ನೀಡಿ ಗೌರವಿಸಲಾಯಿತು.
ಇತ್ತೀಚಿಗೆ ಬಿಜೆಪಿ ಸೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ನಂಜುಂಡಿ ಅವರು, ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ. ಒಂದು ಅಟೆಂಡರ್ ಕೆಲಸ ಕೊಟ್ಟರೂ ಮನಪೂರ್ವಕವಾಗಿ ನಿರ್ವಹಿಸುವುದಾಗಿ ಹೇಳಿದ್ದರು. ಇದ್ದಕ್ಕೆ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ ಅವರು,  
ನಂಜುಂಡಿಯವರಿಗೆ ಶೀಘ್ರದಲ್ಲಿ ಉತ್ತಮ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇಂದು ಯಡಿಯೂರಪ್ಪ, ನಂಜುಂಡಿಯವರಿಗೆ ಉಪಾಧ್ಯಕ್ಷ ಸ್ಥಾನ ನೀಡುವ ಮೂಲಕ ಕೊಟ್ಟು ಭರವಸೆ ಈಡೇರಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್