ಬೆಂಗಳೂರು: ರಾಜ್ಯದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿದ್ದು, ಅದೇ ರೀತಿ ಕೇಂದ್ರ ಸರ್ಕಾರ ಸಹ ರಾಷ್ಟ್ರೀಕೃತ ಬ್ಯಾಂಕ್ ಗಳ ರೈತರ ಸಾಲ ಮನ್ನಾ ಮಾಡುವ ಮೂಲಕ ಸತತ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕು ಎಂದು ಸಿಎಂ ಪ್ರಧಾನಿಗೆ ಬರೆದು ಎರಡು ಪುಟಗಳ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕಳೆದ ಜೂನ್ ರಂದು ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆದಿರುವ ಸುಮಾರು 22 ಲಕ್ಷ ರೈತರ ತಲಾ ರು.50,000 ವರೆಗಿನ ಸಾಲ (ಒಟ್ಟು ರೂ.8,165 ಕೋಟಿ ಸಾಲ) ಮನ್ನಾ ಮಾಡಿದೆ.