ಡಾ.ಕೆ ಸುಧಾಕರ್ 
ರಾಜಕೀಯ

ಯೂಟರ್ನ್ ಹೊಡೆದ ಸುಧಾಕರ್: ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿದ ಶಾಸಕ

ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ರೆಡ್ಡಿ ಹಿರಿಯ ನಾಯಕರ ಮನವೊಲಿಕೆ ನಂತರ ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ....

ಚಿಕ್ಕಬಳ್ಳಾಪುರ:  ರಾಜಿನಾಮೆ ನೀಡುವುದಾಗಿ ಘೋಷಿಸಿದ್ದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ರೆಡ್ಡಿ ಹಿರಿಯ ನಾಯಕರ ಮನವೊಲಿಕೆ ನಂತರ ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಸುಧಾಕರ್ ಅವರ  ಮನವೊಲಿಕೆ ನಂತರ ರಾಜಿನಾಮೆ ನೀಡುವುದಿಲ್ಲ ಎಂದು ಸುಧಾಕರ್ ಘೋಷಿಸಿದ್ದಾರೆ. ವಯಕ್ತಿಕ ವಿಚಾರಗಳನ್ನ ಬದಿಗೊತ್ತಿ ಪಕ್ಷ, ಸಮಾಜದ ಹಿತಾಸಕ್ತಿಯಿಂದ ನಿರ್ಧಾರ ಹಿಂಪಡೆದಿದ್ದಾಗಿ ತಿಳಿಸಿದ್ದಾರೆ
ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸುಧಾಕರ್ ರೆಡ್ಡಿ ಅವರ ತಂದೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಕೇಶವ್ ರೆಡ್ಡಿ ಪದಚ್ಯುತಿಗೆ ಒತ್ತಾಯ ಕೇಳಿಬಂದಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಸುಧಾಕರ್ ರೆಡ್ಡಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವೀಟ್ ಮಾಡಿದ್ದರು. ತಮ್ಮ ಚಾರಿತ್ರ್ಯ ವಧೆ ಮಾಡುತ್ತಿದ್ದಾರೆಂದು ಸುಧಾಕರ್ ಆರೋಪಿಸಿದ್ದರು. ನನ್ನ ತಂದೆ 2 ಬಾರಿ ಜಿ,ಪಂ ಅಧ್ಯಕ್ಷರಾಗಿದ್ದಾರೆ. ಸ್ವಪಕ್ಷದವರಿಂದಲೇ ರಾಜಕೀಯವಾಗಿ ತುಳಿಯುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದಿಂದ ಾಗಮಿಸಿದ್ದ ನೂರಾರು ಕಾಂಗ್ರೆಸ್ ಸದಸ್ಯರು ಸದಾಶಿವನಗರದ ಸುಧಾಕರ್ ರೆಡ್ಡಿ ಮನೆ ಮುಂದೆ ಬೀಡುಬಿಟ್ಟು ರಾಜೀನಾಮೆ ಕೊಡದಂತೆ ಒತ್ತಾಯಿಸಿದ್ದರು. ಈ ಮಧ್ಯೆ, ಸುಧಾಕರ್ ರೆಡ್ಡಿ ಮನೆಗೆ ತೆರಳಿದ್ದ ಸಚಿವ ರಾಮಲಿಂಗಾರೆಡ್ಡಿ, ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮನವೊಲಿಕೆ ಪ್ರಯತ್ನ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!