ಡಾ. ಯತೀಂದ್ರ 
ರಾಜಕೀಯ

ಸಿಎಂ ಪುತ್ರನ ರಾಜಕೀಯ ಪ್ರವೇಶ ಬಹುತೇಕ ಖಚಿತ: ಯತೀಂದ್ರಗೆ ಕಾಂಗ್ರೆಸ್ ಸದಸ್ಯತ್ವ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಯತೀಂದ್ರ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ...

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಇತ್ತೀಚೆಗೆ ಕಾಂಗ್ರೆಸ್‌ ಸೇರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಯತೀಂದ್ರ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಆ ಮೂಲಕ ಮುಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅವರ ಸಕ್ರಿಯ ರಾಜಕೀಯ ಪ್ರವೇಶ ಖಚಿತಗೊಂಡಿದೆ.
ಯತೀಂದ್ರ ಎರಡು ತಿಂಗಳ ಹಿಂದೆಯೇ ಪಕ್ಷದ ಸದಸ್ಯತ್ವ ತೆಗೆದುಕೊಂಡಿದ್ದಾರೆ. ಆದರೆ, ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಿಲ್ಲ ಎಂದು ಮೈಸೂರು ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ಜೆ. ವಿಜಯಕುಮಾರ್‌ ತಿಳಿಸಿದ್ದಾರೆ. ಈ ವಿಷಯವನ್ನು ರಾಜ್ಯ ಕಾಂಗ್ರೆಸ್‌ ಘಟಕ ರಹಸ್ಯವಾಗಿ ಇಟ್ಟಿದೆ.
ಈ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಕಣಕ್ಕಿಳಿಯುತ್ತಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಯತೀಂದ್ರ ಅವರನ್ನು ವರುಣಾ ಕ್ಷೇತ್ರದ ಜಾಗೃತಿ ಸಮಿತಿ ಅಧ್ಯಕ್ಷರಾಗಿ 2 ತಿಂಗಳ ಹಿಂದೆ ಸರ್ಕಾರ ನೇಮಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT