ಸಂಗ್ರಹ ಚಿತ್ರ 
ರಾಜಕೀಯ

ಕಲ್ಲಡ್ಕ ಪ್ರಭಾಕರ್ ಭಟ್ ಬಂಧನವಾದರೆ ಕರ್ನಾಟಕ ಹೊತ್ತಿ ಉರಿಯುತ್ತೆ: ಬಿಎಸ್ ಯಡಿಯೂರಪ್ಪ

ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿದರೆ ಕರ್ನಾಟಕದಲ್ಲಿ ಬೆಂಕಿ ಹೊತ್ತಿ ಉರಿಯಬಹುದು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

ಮಂಗಳೂರು: ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿದರೆ ಕರ್ನಾಟಕದಲ್ಲಿ ಬೆಂಕಿ ಹೊತ್ತಿ ಉರಿಯಬಹುದು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

ಮಂಗಳೂರಿನ ಕದ್ರಿಯಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆಪಿಸಿಸಿ ಉಸ್ತುವಾರಿಯಾಗಿರುವ ಕೇರಳದ ಕೆಸಿ ವೇಣುಗೋಪಾಲ್ ರಾಜ್ಯದಲ್ಲಿ ಕೇರಳ ಮಾದರಿಯ ಕೊಲೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ.  ಗಲಭೆ ಪ್ರಕರಣಗಳಿಗೆ ಸಂಬಂಧಿಸಿ ಅಮಾಯಕರನ್ನು ಬಂಧಿಸಲಾಗುತ್ತಿದೆ ಹಾಗೂ ನೈಜ ಆರೋಪಿಗಳಿಗೆ ರಕ್ಷಣೆ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಅಂತೆಯೇ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 24ಕ್ಕಿಂತ  ಹೆಚ್ಚು ಕೊಲೆ ಪ್ರಕರಣಗಳು ನಡೆದಿವೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆದರೆ ಸತ್ಯ ಹೊರಬರಲಿದೆ ಎಂದೂ ಯಡಿಯೂರಪ್ಪ ಆಗ್ರಹಿಸಿದರು.

ಇದು ಕರ್ನಾಟಕದಲ್ಲಿ ನಡೆಯವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು
ಇದೇ ವೇಳೆ ಯಡಿಯೂರಪ್ಪ ಅವರ ಮಾತಿಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರ ಮಾತಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇಂತಹುವಗಳೆಲ್ಲಾ ಕರ್ನಾಟಕದಲ್ಲಿ ನಡೆಯೋದಿಲ್ಲ. ಇಂತಹ  ಹಿಂಸಾಚಾರದ ಮಾತುಗಳನ್ನಾಡುವ ಇವರು ನಿಜವಾದ ಹಿಂದೂಗಳಾ...ಇವರು ನಿಜವಾದ ಹಿಂದುತ್ವವಾದಿಗಳಾ ಅಥವಾ ಹಿಂದುತ್ವವನ್ನು ಗುತ್ತಿಗೆ ಪಡೆದಿದ್ದಾರೆ ಎಂದು ಕಿಜಿಕಾರಿದ್ದಾರೆ. ಕಾನೂನಿಗೆ ಎಲ್ಲರೂ ಒಂದೇ..ಯಾರೇ ತಪ್ಪು  ಮಾಡಿದ್ದರೂ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ದಸರಾ ಉದ್ಘಾಟನೆ ಮಾಡುವಷ್ಟು ದೊಡ್ಡವನು ನಾನಲ್ಲ, ಮಹನೀಯರು ಹಚ್ಚಿದ ದೀಪ ಆರದಿರಲಿ ಎಂದು ಪ್ರಾರ್ಥಿಸಲಿಕ್ಕೆ ಬಂದಿದ್ದೇನೆ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ