ರಾಜಕೀಯ

ಭಾರತ-ಚೀನಾ ಗಡಿ ವಿವಾದ ಕುರಿತು ಸಭೆ: ದೇವೇಗೌಡರಿಗೆ ಪ್ರಧಾನಿ ಮೋದಿ ಆಹ್ವಾನ

Lingaraj Badiger
ನವದೆಹಲಿ: ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಸಭೆ ಕರೆದಿದ್ದು, ಅದಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರಿಗೆ ಆಹ್ವಾನಿಸಿದ್ದಾರೆ.
ಪ್ರಧಾನಿ ಸೂಚನೆ ಮೇರೆಗೆ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಅವರು ಇಂದು ಎಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ.
ಸಿಕ್ಕಿಂನ ಡೋಕ್ಲಾ ಗಡಿ ವಿವಾದ ಉದ್ವಿಗ್ನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆ ಅಗತ್ಯ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದು, ತಾವು ಸಂಜೆ ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಹಾಜರಾಗಬೇಕೆಂದು ಸುಷ್ಮಾ ಸ್ವರಾಜ್ ಅವರು ಮಾತುಕತೆ ವೇಳೆ ತಿಳಿಸಿರುವುದಾಗಿ ಮಾಧ್ಯಮ ವರದಿ ವಿವರಿಸಿದೆ.
ದೂರವಾಣಿಯಲ್ಲಿ ಕನ್ನಡದಲ್ಲೇ ಮಾತನಾಡಿದ ಸುಷ್ಮಾ ಸ್ವರಾಜ್ ಅವರು, ದೇವೇಗೌಡರ ಆರೋಗ್ಯ ವಿಚಾರಿಸಿದರು. ದೆಹಲಿಯ ಜವಾಹರ ಭವನದಲ್ಲಿ ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ದೇವೇಗೌಡರು ಮಧ್ಯಾಹ್ನ 1.30ಕ್ಕೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.
SCROLL FOR NEXT