ಸಿದ್ದರಾಮಯ್ಯ 
ರಾಜಕೀಯ

ರಾಜ್ಯಕ್ಕೆ ಪ್ರತ್ಯೇಕ ಧ್ವಜ: ಸಿದ್ದರಾಮಯ್ಯರನ್ನು ವಜಾಗೊಳಿಸುವಂತೆ ಸೋನಿಯಾಗೆ ಶಿವಸೇನೆ ಆಗ್ರಹ

ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದಲು ಮುಂದಾಗಿರುವ ಕರ್ನಾಟಕ ಸರ್ಕಾರವನ್ನು ಶಿವಸೇನೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದು,...

ಮುಂಬೈ: ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದಲು ಮುಂದಾಗಿರುವ ಕರ್ನಾಟಕ ಸರ್ಕಾರವನ್ನು ಶಿವಸೇನೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷದ ಇತಿಹಾಸ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ನಿರ್ಧಾರ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದೆ.
ಕೇಂದ್ರ ಸರ್ಕಾರ ಸಹ ಈ ಕೂಡಲೇ ಕರ್ನಾಟಕ ಸರ್ಕಾರವನ್ನು ವಜಾಗೊಳಿಸಬೇಕು ಅಥವಾ ರಾಜ್ಯಕ್ಕೆ ನೀಡುತ್ತಿರುವ ನೆರವನ್ನು ನಿಲ್ಲಿಸಬೇಕು ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಒತ್ತಾಯಿಸಿದೆ.
ಇನ್ನು ಬಿಜೆಪಿ ಸಹ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಅಸಂವಿಧಾನಿಕ ನಿರ್ಧಾರವಾಗಿದೆ ಮತ್ತು ದೇಶದ್ರೋಹ ಮಾಡಿದಂತಾಗುತ್ತದೆ ಎಂದು ಹೇಳಿದೆ.
ಕರ್ನಾಟಕ ಸರ್ಕಾರ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಕೇಳುವ ಮೂಲಕ ರಾಷ್ಟ್ರಧ್ವಜಕ್ಕ, ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ದೇಶಕ್ಕಾಗಿ ಪ್ರಾಣತೆತ್ತ ಯೋಧರಿಗೆ ಅವಮಾನ ಮಾಡಿದಂತಾಗಿದೆ ಎಂದು ಶಿವಸೇನೆ ಸಾಮ್ನಾ ಸಂಪಾದಕೀಯದಲ್ಲಿ ಆರೋಪಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಂದ ಮೊದಲು ರಾಜಿನಾಮೆ ಪಡೆದು ದೇಶದ ಮೇಲಿನ ಪ್ರೀತಿಯನ್ನು ಪ್ರದರ್ಶಿಸಲಿ ಎಂದು ಶಿವಸೇನೆ ಒತ್ತಾಯಿಸಿದೆ.
ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಸಂಬಂಧ ಜೂನ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಈ ಸಮಿತಿಯಲ್ಲಿ ಹಿರಿಯ ಸಾಹಿತಿಗಳು ಹಾಗೂ ಚಿಂತಕರು ಸದಸ್ಯರಾಗಿರಲಿದ್ದಾರೆ. ಈ ಸಮಿತಿಯು ಅಧ್ಯಯನ ನಡೆಸಿ ಹಾಲಿ ಇರುವ ಧ್ವಜವನ್ನೇ ಅಂಗೀಕರಿಸಬೇಕೆ, ಇಲ್ಲವೇ ಹೊಸದೊಂದು ಧ್ವಜವನ್ನು ಮಾನ್ಯ ಮಾಡಬೇಕೆ ಎಂಬುದರ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!