ರಾಜಕೀಯ

ಶಾಸನಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿ: ಮಹಿಳಾ ಮತದಾರರನ್ನು ಸೆಳೆಯಲು ಜೆಡಿಎಸ್ ತಂತ್ರ

Shilpa D
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಇಬ್ಬರು ಸೊಸೆಯಂದಿರು ರಾಜಕಾರಣದಲ್ಲಿ ಬಹಳ ಆಸಕ್ತಿ ವಹಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅನಿತಾ ಮತ್ತು ಭವಾನಿ ರೇವಣ್ಣ ಅವರಿಗೆ ಟಿಕೆಟ್ ಸಿಗಲಿದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ಇದೇ ವೇಳೆ ಜೆಡಿಎಸ್ ಮಹಿಳಾ ಮತದಾರರನ್ನು ಸೆಳೆಯಲು ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರಲು ಎಲ್ಲಾ ರೀತಿಯ ಹೋರಾಟ ನಡೆಸುವುದಾಗಿ ಘೋಷಿಸಿದೆ.
ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ  ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ  ಒಪ್ಪಿಗೆ ಸಿಗುವ ಸಾಧ್ಯತೆಯಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. 
ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಜಾರಿಗೆ ತರಲು ರಾಜ್ಯ ಮತ್ತು ಕೇಂದ್ರಸರ್ಕಾರಕ್ಕೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಈ ಸಂಬಂಧ ಈಗಾಗಲೇ ಪ್ರಧಾನಿ ಮೋದಿಗೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ. 
ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರದ್ದು ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಮುಂಬರುವ ಮಹಿಳೆಯರಿಗೆ ಕುಮಾರಸ್ವಾಮಿ ಪ್ರೋತ್ಸಾಹ ನೀಡುತ್ತಾರೆ, ಸ್ಪರ್ಧಿಗಳಿಗೆ ರಾಜಕೀಯ ಹಿನ್ನೆಲೆ ಅಥವಾ ಹಣದ ಹಿನ್ನೆಲೆ ಇರುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
SCROLL FOR NEXT