ರಮಾನಾಥ ರೈ 
ರಾಜಕೀಯ

ಅರಣ್ಯ ಸಚಿವ ರಮಾನಾಥ ರೈಗೆ ಗೃಹ ಖಾತೆ ಹೊಣೆ?: ಸಿಎಂ ನಿವಾಸದಲ್ಲಿ ಸಮಾಲೋಚನೆ

ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್‌ ರಾಜೀನಾಮೆಯಿಂದ ತೆರವಾಗಿದ್ದ ಗೃಹ ಖಾತೆಯನ್ನು ಅರಣ್ಯ ಸಚಿವ ರಮಾನಾಥ ರೈ ಅವರಿಗೆ ನೀಡಲು ಸಿಎಂ ಸಿದ್ದರಾಮಯ್ಯ ...

ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್‌ ರಾಜೀನಾಮೆಯಿಂದ ತೆರವಾಗಿದ್ದ ಗೃಹ ಖಾತೆಯನ್ನು ಅರಣ್ಯ ಸಚಿವ ರಮಾನಾಥ ರೈ ಅವರಿಗೆ ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಸಚಿವ ರಮಾನಾಥ ರೈ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮ್ಯ ಗೃಹ ಖಾತೆಯ ಜವಾಬ್ದಾರಿ ನೀಡುವ ಕುರಿತಂತೆ ಅವರೊಂದಿಗೆ ಚರ್ಚಿಸಿದರು. ಅಷ್ಟೇ ಅಲ್ಲ ಹೈ ಕಮಾಂಡ್‌ ಸೂಚನೆಯನ್ನೂ ರೈ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ನಡುವೆ ಬಿ.ಸಿ. ರೋಡ್‌ನ‌ಲ್ಲಿ ಕೋಮು ಗಲಭೆ ಸೃಷ್ಟಿಯಾಗಿ ಸ್ವತಂತ್ರ ಗೃಹ ಸಚಿವರು ಇಲ್ಲದಿರುವುದೂ ಕೂಡ ಖಾತೆಯ ವೈಫ‌ಲ್ಯಕ್ಕೆ ಕಾರಣ ವಾಗಿತ್ತು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಸಿಎಂ ಸಿದ್ದರಾಮಯ್ಯ ಗೃಹ ಖಾತೆಯ ಜವಾಬ್ದಾರಿನೀಡಲು ಎಲ್ಲ  ಹಿರಿಯ ಸಚಿವರಿಗೂ ಕೋರಿಕೊಂಡಿದ್ದರು. ಆದರೆ, ಬಹುತೇಕ ಸಚಿವರು ಗೃಹ ಇಲಾಖೆ ಜವಾಬ್ದಾರಿ ಹೊರಲು ಹಿಂದೇಟು ಹಾಕಿದ್ದರು.
ಗೃಹ ಖಾತೆಯನ್ನು ವಾರದೊಳಹೆ ವಹಿಸಿಕೊಡಬಹುದು ಅಥವಾ  ಸಂಪುಟ ವಿಸ್ತರಣೆ ವೇಳೆ ಖಾತೆ ಹಂಚಿಕೆ ಮಾಡಬಹುದು, ರಮಾನಾಥ ರೈ ಗೃಹ ಸಚಿವ ಆಗುವುದು ಖಚಿತ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT