ದಿಗ್ವಿಜಯ್ ಸಿಂಗ್ 
ರಾಜಕೀಯ

ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಗೆ ಕೊಕ್

ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರಿಗೆ....

ನವದೆಹಲಿ: ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರಿಗೆ ಮಂಗಳವಾರ ಕೊಕ್ ನೀಡಲಾಗಿದ್ದು, ಅವರ ಸ್ಥಾನಕ್ಕೆ ಆರ್ ಸಿ ಕುಂಟಿಯಾ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಹೊಸ ತಂಡಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಪ್ಪಿಗೆ ನೀಡಿದ್ದು, ದಿಗ್ವಿಜಯ್ ಸಿಂಗ್ ಅವರನ್ನು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂಟಿಯಾ ಅವರಿಗೆ ಪಕ್ಷದ ಕಾರ್ಯದರ್ಶಿಯಾಗಿರುವ ಸತೀಸ್ ಜಾರಕಿಹೋಳಿ ಅವರು ತೆಲಂಗಾಣದಲ್ಲಿ ಸಹಕಾರ ನೀಡಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ,
ದಿಗ್ವಿಜಯ್ ಸಿಂಗ್ ಅವರನ್ನು ಕಳೆದ ಏಪ್ರಿಲ್ ನಲ್ಲಿ ಕರ್ನಾಟಕ ಉಸ್ತುವಾರಿಯಿಂದ ತೆಗೆದು ಹಾಕಲಾಗಿತ್ತು. ಅಲ್ಲದೆ ಗೋವಾದಲ್ಲಿ ಸರ್ಕಾರ ರಚಿಸಲು ವಿಫಲವಾದ ಹಿನ್ನೆಲೆಯಲ್ಲಿ ಗೋವಾ ಉಸ್ತುವಾರಿಯನ್ನು ಕಳೆದುಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!