ಪರಮೇಶ್ವರ್ 
ರಾಜಕೀಯ

ಅವಧಿಗೂ ಮುನ್ನ ರಾಜ್ಯ ವಿಧಾನಸಭೆ ಚುನಾವಣೆ ಸಾಧ್ಯತೆ ಇಲ್ಲ: ಪರಮೇಶ್ವರ್

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿ ಮೇ- 2018 ಕ್ಕೆ ಕೊನೆಗೊಳ್ಳಲಿದೆ, ಆದರೆ ಅವಧಿಗೂ ಮುನ್ನ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ...

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿ ಮೇ- 2018 ಕ್ಕೆ ಕೊನೆಗೊಳ್ಳಲಿದೆ, ಆದರೆ ಅವಧಿಗೂ ಮುನ್ನ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಪ್ರೆಸ್‌ಕ್ಲಬ್‌ ಮತ್ತು ವರದಿಗಾರರ ಕೂಟ  ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದರು. ಅವಧಿಗೂ ಮುನ್ನ ಅಂದರೆ ಡಿಸೆಂಬರ್ ನಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದೆ ಅವರು, ಅವಧಿಗೂ ಮುನ್ನವೇ ಸಿದ್ದರಾಮಯ್ಯ ಸರ್ಕಾರ ಚುನಾವಣೆ ನಡೆಯುವುದಿಲ್ಲ, ಸರ್ಕಾರದ ಪೂರ್ಣ ಅವಧಿ ಮುಗಿದ ನಂತರವೇ ವಿಧಾನ ಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.
ತಾವು ಸಿಎಂ ಹುದ್ದೆಯ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ 2018ರ ವಿಧಾನಸಭೆ ಚುನಾವಣೆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ, ಪಕ್ಷ ಗೆಲ್ಲುವದಷ್ಟೇ ನನ್ನ ಮೊದಲ ಆದ್ಯತೆ. ಸದ್ಯದ ಪರಿಸ್ಥಿತಿಯಲ್ಲಿ ನಾನು ಸಿಎಂ ಅಭ್ಯರ್ಥಿಯಲ್ಲ, ಸಿಎಂ ಯಾರು ಎಂಬುದನ್ನು ಚುನಾವೆ ನಂತರ ಕಾಂಗ್ರೆಸ್ ಶಾಸಂಕಾಂಗ ನಿರ್ಧರಿಸುತ್ತದೆ ಎಂದು ಹೇಳಿದರು.
ದಲಿತ ಮುಖ್ಯಮಂತ್ರಿ ವಿಷಯದಲ್ಲಿ ನನ್ನಿಂದ ಗೊಂದಲ ಆಗಿಲ್ಲ.  ನಾನು ಅರ್ಜಿ ಹಾಕಿ ದಲಿತ ಸಮುದಾಯದಲ್ಲಿ ಹುಟ್ಟಿಲ್ಲ. ದಲಿತರಿಗೂ ಒಮ್ಮೆ ಅವಕಾಶ ಸಿಗಬೇಕು ಎಂಬುದು ಆ ಸಮುದಾಯದವರಿಗೆ ಮಾತ್ರವಲ್ಲ, ಬೇರೆಯವರಿಗೂ ಆಸೆ ಇದೆ. ಆದರೆ, ಈ ಚರ್ಚೆ ಈಗ ಅಪ್ರಸ್ತುತ’  ನನಗಿಂತ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ ಎಂದು ಹೇಳಿದ್ದಾರೆ. ಸದ್ಯ ವಿಧಾನ ಸಭೆ ಚುನಾವಣೆಯಲ್ಲಿ ಗೆಲ್ಲುವುದಷ್ಟೆ ನಮ್ಮ ಗುರಿ ಎಂದು ಹೇಳಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜೂನ್ 12 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂಬೇಡ್ಕರ್ ಭವನದಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ರಿಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಿದ್ಧತೆಗಾಗಿ ಜೂನ್ 11 ರ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!