ರಾಹುಲ್ ಗಾಂಧಿ 
ರಾಜಕೀಯ

ಬೆಂಗಳೂರು: ರಾಜೀವ್ ಗಾಂಧಿ ಅವರನ್ನು ನೆನಪಿಸಿದ ರಾಹುಲ್ ಭಾಷಣ

ಪಕ್ಷದ ಸಾಮಾನ್ಯ ಸಭೆಯಲ್ಲಿ ಮಾತನಾಡf, ಮೌನವಾಗಿರಬೇಡಿ ಎಂದು ಹೇಳಿದ ಹೇಳಿದ ಅವರು, ದಲಿತ ಅಧಿಕಾರಿಗಳನ್ನು ದಮನ ಮಾಡಲು ಅವರು ಪ್ರಯತ್ನ ನಡೆಸುತ್ತಿದ್ದಾರೆ ...

ಬೆಂಗಳೂರು: ರಾಜಕೀಯ ಕಾರಣಗಳಿಂದಾಗಿ  ಸ್ಥಗಿತಗೊಂಡಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಬೆಂಗಳೂರಿನಲ್ಲಿ ಎಐಸಿಸಿ ಉಫಾಧ್ಯಕ್ಷ ರಾಹುಲ್ ಗಾಂಧಿ ರಿಲಾಂಚ್ ಮಾಡಿದ್ದಾರೆ. 
ನಿನ್ನೆ ಪತ್ರಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರ ಜೊತೆ ಎರಡು ಸಭೆ ನಡೆಸಿದರು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಪಕ್ಷದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ದಲಿತ ಅಧಿಕಾರಿಗಳನ್ನು ದಮನ ಮಾಡಲು ಅವರು ಪ್ರಯತ್ನ ನಡೆಸುತ್ತಿದ್ದಾರೆ, ನೀವು ಸುಮ್ಮನಿರಬೇಡಿ, ಮೌನವಾಗಿರಬೇಡಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಸಾಮಾನ್ಯ ಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣ, 1985 ರಲ್ಲಿ ಕಾಂಗ್ರೆಸ್ ಶತಮಾನೋತ್ಸವ ಸಮಾರಂಭದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ  ಮಾತುಗಳನ್ನು ನೆನಪಿಸಿಕೊಳ್ಳುವಂತೆ ಮಾಡಿತು. 
ಈ ಹಿಂದೆ ವಿಧಾನಸಭೆ ಚುನಾವಣೆಗೆ ಟಿಕೆಟ್ ಗಳನ್ನ ಅಂತಿಮ ಕ್ಷಣದಲ್ಲಿ ಪ್ರಭಾವ ಬೀರಿ, ಹೆಲಿಕಾಪ್ಟರ್ ನಲ್ಲಿ ಬಂದು ಪಡೆದುಕೊಂಡು ಹೋಗುವ ಪದ್ಧತಿ ಇತ್ತು.  ಆ ಸಂಸ್ಕತಿ ಈಗ ಅಂತ್ಯವಾಗಿದೆ. ಪಕ್ಷದ ಕಾರ್ಯಕರ್ತರನ್ನು ಗೌರವಿಸಿ ಅವರಿಗೆ ಸಿಗಬೇಕಾದ, ಗೌರವ ನೀಡಿ, ನಾಯಕರು ಅವರ ಹುದ್ದೆಗಳನ್ನು ಟೇಕನ್ ಫಾರ್ ಗ್ರಾಂಟೆಡ್ ರೀತಿ ವರ್ತಿಸಬಾರದು ಎಂದು ಹೇಳಿದ್ದಾರೆ.
ಪಂಜಾಬ್ ಹೊರತು ಪಡಿಸಿದರೇ ಇಡೀ ದೇಶದಲ್ಲಿ ಕಾಂಗ್ರೆಸ್ ಆಡಳಿತ ಇರುವ ರಾಜ್ಯ ಕರ್ನಾಟಕ ಆಗಿದೆ, ತುರ್ತು ಪರಿಸ್ಥಿತಿಯ ನಂತರ ಅಂದರೆ 1978 ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರಿನಿಂದ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಿಸಿ ಗೆದ್ದಿದ್ದರು.
2018 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಹಾಗೂ 2019 ಕ್ಕೆ ಲೋಕಸಭೆ ಚುನಾವಣೆ ನಡೆಯಲಿದೆ. ರೈತರು, ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಸಿದ್ದರಾಮಯ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಂಡಿದೆ, ಅವುಗಳನ್ನು ಜಾರಿಗೊಳಿಸಿದೆ, ಇದನ್ನೇ ಮುಂದಿಟ್ಟುಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!