ಸಿದ್ದರಾಮಯ್ಯ 
ರಾಜಕೀಯ

ರಾಷ್ಟ್ರಪತಿ ಜೊತೆ ಉಡುಪಿಗೆ ತೆರಳದ ಸಿಎಂ ರಹಸ್ಯ ಸ್ಥಳಕ್ಕೆ ಪ್ರಯಾಣ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಗದಿಯಂತೆ ಭಾನುವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ..

ಬೆಂಗಳೂರು: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಗದಿಯಂತೆ ಭಾನುವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಕೃಷ್ಣಮಠ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜೊತೆಗೆ ಆಱೋಗ್ಯ ಸಚಿವ ರಮೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿಗೆ ಕಳುಹಿಸಿದ್ದಾರೆ.
ಕೃಷ್ಣ ಮಠದ ವಿವಾದದ ಹಿನ್ನೆಲೆಯಲ್ಲಿ ಸಿಎಂ ಉಡುಪಿಗೆ ತೆರಳಲಿಲ್ಲ ಎಂದು ಮೂಲಗಳು ತಿಳಿಸಿವೆ. ಸಿಎ ಸಿದ್ದರಾಮಯ್ಯ ಉಡುಪಿ ಶ್ರೀಕೃಷ್ಣ ಮಠದ ಭಕ್ತರಲ್ಲ, ಆದರೂ ದೇವಾಲಯಗಳಿಗೆ ತೆರಳುತ್ತಾರೆ. ಸಿಎಂ ಉಡುಪಿಗೆ ಭೇಟಿ ನೀಡದ್ದಕ್ಕೆ ಇದು ಕಾರಣವಲ್ಲ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ ಕನಕ ಗೋಪುರ ಸಂಬಂಧ 2004 ರಲ್ಲಿ ಉಂಟಾದ ವಿವಾದದಿಂದಾಗಿ ಉಡುಪಿಗೆ ಸಿಎಂ ತೆರಳಲಿಲ್ಲ ಎಂದು ಹೇಳಲಾಗಿದೆ. 
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು  ಬೀಳ್ಕೊಟ್ಟ ಸಿಎಂ ಮತ್ತು ಪರಮೇಶ್ವರ್ ರಹಸ್ಯ ಸ್ಥಳಕ್ಕೆ ತೆರಳಿ ವಿಧಾನಮಂಡಲದ ಕಲಾಪದಲ್ಲಿ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗಾದ ಸೋಲು ಹಾಗೂ ಅಧಿವೇಶನದ ನಂತರ ಗೃಹ ಖಾತೆಯನ್ನು ಯಾರಿಗೆ ವಹಿಸಬೇಕೆಂಬ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

'ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ': ಚೀನಾ ಹಿಂದಿಕ್ಕಲು ಇನ್ಫೋಸಿಸ್ ನಾರಾಯಣ ಮೂರ್ತಿ '9,9,6' ಸೂತ್ರ!

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?

'ಬೆಂಗಳೂರು ಟೆಕ್ ಸಮ್ಮಿಟ್ 2025'ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

SCROLL FOR NEXT