ರಮೇಶ್ ಕುಮಾರ್ 
ರಾಜಕೀಯ

ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ: ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ಆರೋಗ್ಯ ಸಚಿವರು

ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ವಿಧೇಯಕ ತರಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಇದರಿಂದ ಹಿಂದೆ....

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ವಿಧೇಯಕ ತರಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ವಿಧಾನ ಪರಿಷತ್‌ ನಲ್ಲಿ ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು, ಈಗಾಗಲೇ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಅದನ್ನು ವಿಧಾನ ಪರಿಷತ್‌ನಲ್ಲೂ ಮಂ‌ಡಿಸಿ ಸದನದ ಒಪ್ಪಿಗೆ ಪಡೆದು ವಿಧೇಯಕವನ್ನು ಜಾರಿ ಮಾಡುತ್ತೇವೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವ ವಿಧೇಯಕ ಬಗ್ಗೆ ಮುಕ್ತ ಚರ್ಚೆಗೆ ಅವಕಾಶ ಮಾಡಿಕೊಡಿ ಇಲ್ಲವೆ ಜಂಟಿ ಸದನ ಸಮಿತಿಗೆ ಒಪ್ಪಿಸಿ, ಸಾಧಕ-ಬಾಧಕಗಳ ಬಳಿಕ ಜಾರಿಗೆ ತನ್ನಿ ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಜಂಟಿ ಸದನ ಸಮಿತಿಗೆ ಒಪ್ಪಿಸಿದರೆ ಆ ವಿಧೇಯಕ ವಿಳಂಬವಾಗುವುದು ಖಚಿತ, ಹೀಗಾಗಿ ಸದನದಲ್ಲಿ ಎಲ್ಲರಿಗೂ ಮಾತನಾಡಲು ಮುಕ್ತ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು. ನಿಮ್ಮ ಗೊಂದಲಗಳನ್ನು ಹೇಳಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಮುಂದಾಗಿರುವ ಸರ್ಕಾರದ ಕ್ರಮಗಳನ್ನೂ ಹೇಳಲಾಗುವುದು ಎಂದರು.
ಯಾವುದೇ ಪೂರ್ವಾಗ್ರಹ ಪೀಡಿತವಾಗಿ ಏಕಾ-ಏಕಿ ನಿರ್ಧಾರ ತೆಗೆದುಕೊಂಡಿಲ್ಲ. ಕಳೆದ 9 ತಿಂಗಳಿಂದ ನಿರಂತರವಾಗಿ ಚರ್ಚೆ ನಡೆಸಿ ಈ ಸಂಬಂಧ ಸಮಿತಿಯನ್ನೂ ರಚಿಸಿ ಜನ ಸಾಮಾನ್ಯರಿಗೆ ಆಗುತ್ತಿದ್ದ ತೊಂದರೆಯನ್ನು ತಪ್ಪಿಸುವ ಸಲುವಾಗಿ ಈ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವ ವಿಧೇಯಕವನ್ನು ತರಲಾಗುತ್ತಿದೆ ಎಂದರು.
ಖಾಸಗಿ ಆಸ್ಪತ್ರೆಗಳು ನೀಡುವ ವೈದ್ಯಕೀಯ ಚಿಕಿತ್ಸಾ ಶುಲ್ಕವನ್ನು ಸರ್ಕಾರ ನಿಗದಿ ಪಡಿಸಲು ಮುಂದಾಗಿರುವುದು, ಜನರ ದೂರು ಆಲಿಸಲು ಸಮಿತಿ ರಚನೆ ಮಾಡುವುದು ಸೇರಿದಂತೆ ವೈದ್ಯಕೀಯ ಸಂಸ್ಥೆಗಳನ್ನು ನಿಯಂತ್ರಿಸುವ ಉದ್ದೇಶದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಜಾರಿಗೆ ವಿರೋಧಿಸಿ ರಾಜ್ಯಾದ್ಯಂತ ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್