ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಎಚ್. ವಿಶ್ವನಾಥ್
ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಎಚ್. ವಿಶ್ವನಾಥ್ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿದ್ದಾರೆ,...
ಮೈಸೂರು: ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಎಚ್. ವಿಶ್ವನಾಥ್ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿದ್ದಾರೆ,
ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸಿದ್ದರಾಮಯ್ಯರಿರುವ ಕಾಂಗ್ರೆಸ್ ಪಕ್ಷದಲ್ಲಿ ನಾನಿರುವುದಿಲ್ಲ ಎಂದು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ ಅವರು, ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ದ್ವೇಷವಿಲ್ಲ. ಅಧಿಕಾರದಲ್ಲಿರುವವರು ಹಾಗೂ ಪಕ್ಷ ನಡೆಸುವವರಿಂದ ನನಗೆ ನೋವಾಗಿದೆ ಎಂದು ಹೇಳಿದ್ದಾರೆ. ಜೂನ್ 23 ರಂದು ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಲಿರುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಯಿಂದ ಬೇಸತ್ತಿರುವ ಅವರು, ಕುರುಬ ಸಮುದಾಯದವರಿಗೆ ಒಂದೇ ಒಂದು ಸಚಿವ ಸ್ಥಾನ ನೀಡಿಲ್ಲ. ನಿಮ್ಗೊಮ ಗೊತ್ತಿದ್ದರೆ ನಿಮ್ಮನ್ನು ಕಾಂಗ್ರೆಸ್ ಪಕ್ಷದೊಳಗೆ ಬಿಟ್ಟುಕೊಳ್ಳುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.