ರಮಾನಾಥ ರೈ 
ರಾಜಕೀಯ

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ರಮಾನಾಥ ರೈ ಹೇಳಿಕೆ: ಉಭಯ ಸದನಗಳಲ್ಲೂ ಕೋಲಾಹಲ

ಆರ್ ಎಸ್ ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಭೂಷಣ್ ಜಿ ಬೊರಸೆ ಅವರಿಗೆ ಸಚಿವ ರಮಾನಾಥ ರೈ ...

ಬೆಂಗಳೂರು:  ಆರ್ ಎಸ್ ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಭೂಷಣ್ ಜಿ ಬೊರಸೆ ಅವರಿಗೆ ಸಚಿವ ರಮಾನಾಥ ರೈ  ಆದೇಶ ನೀಡುತ್ತಿರುವ ವಿಡಿಯೋ ಪ್ರಕರಣ ಸೋಮವಾರ ವಿಧಾನಸಭೆಯ ಕಲಾಪದಲ್ಲೂ ಪ್ರತಿಧ್ವನಿಸುವ ಮೂಲಕ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಯಿತು.
ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸುವಂತೆ ಹೇಳಿರುವ ಸಚಿವ ರಮಾನಾಥ ರೈ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಪಟ್ಟು ಹಿಡಿದು ಆಗ್ರಹಿಸಿದರು. 
ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರ ನಡೆಯುತ್ತಿದ್ದಂತೆಯೇ ಸ್ಪೀಕರ್ ಕೆಬಿ ಕೋಳಿವಾಡ ಅವರು ಎದ್ದು ನಿಂತು ಗದ್ದಲ ಎಬ್ಬಿಸದಂತೆ ಮನವಿ ಮಾಡಿದರು. ಆದರೆ ಸಚಿವ ರಮಾನಾಥ  ರೈ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ರಾಜೀನಾಮೆ ಕೊಡುವಂತೆ ಪಟ್ಟು ಹಿಡಿದು ಒತ್ತಾಯಿಸಿದರು.
ಜಗದೀಶ್ ಶೆಟ್ಟರ್ ಅವರು ವಿಷಯ ಪ್ರಸ್ತಾಪಿಸಿ, ಪ್ರಭಾಕರ್ ಭಟ್ ಅವರನ್ನು ಬಂಧಿಸಿ ಎಂದು ಹೇಳಲು ರಮಾನಾಥ ರೈ ಯಾರು ಎಂದು ಪ್ರಶ್ನಿಸಿದರು. ಈ ವೇಳೆ ಹಲವು ಬಿಜೆಪಿ ನಾಯಕರು ಶೆಟ್ಟರ್ ಬೆಂಬಲಕ್ಕೆ ನಿಂತರು. ರಮಾನಾಥ್ ರೈ ಅವರು ಕರಾವಳಿ ಭಾಗದಲ್ಲಿ ಕೋಮು ಗಲಭೆ ಹೆಚ್ಚುತ್ತಿದೆ ಎಂದು ಆರೋಪಿಸಿದರು. 
ಇನ್ನು ರಮಾನಾಥ ರೈ ಅವರನ್ನು ಸಮರ್ಥಿಸಿಕೊಂಡ ಜಿ. ಪರಮೇಶ್ವರ, ಪ್ರಭಾಕರ್ ಭಟ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ, ಇದ ಕೋಮ ಸಂಘರ್ಷಕ್ಕೆ ಕಾರಣವಾಗಿದೆ ಎಂದು ಹೇಳಿದರು. ಎಸ್ ಪಿ ಅವರಿಗೆ ಬಂಧಿಸಿ ಅಂತ ಹೇಳಿದ ತಕ್ಷಣ, ಅವರು ಕರುಡಾಗಿ ಯಾರನ್ನು ತನಿಖೆ ಮಾಡದೇ ಬಂಧಿಸುವುದಿಲ್ಲ ಎಂದು ಹೇಳಿದ್ದಾರೆ.
ರಮಾನಾಥ ರೈ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!