ರಾಹುಲ್ ಗಾಂಧಿ 
ರಾಜಕೀಯ

ವಿಧಾನಸಭೆ ಚುನಾವಣೆ ಹಿನ್ನೆಲೆ: ರಾಹುಲ್ ಬಲವಂತಕ್ಕೆ ಮಣಿದು ಸಾಲಮನ್ನಾ ಘೋಷಿಸಿದ ರಾಜ್ಯ ಸರ್ಕಾರ

ಸಹಕಾರಿ ಬ್ಯಾಂಕ್ ಗಳಲ್ಲಿ 50 ಸಾವಿರ ರು ವರೆಗಿನ ರೈತರ ಸಾಲಮನ್ನಾ ಮಾಡೂವ ಮೂಲಕ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ...

ಬೆಂಗಳೂರು: ಸಹಕಾರಿ ಬ್ಯಾಂಕ್ ಗಳಲ್ಲಿ  50 ಸಾವಿರ ರು ವರೆಗಿನ ರೈತರ ಸಾಲಮನ್ನಾ ಮಾಡೂವ ಮೂಲಕ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ಸ್ತಂಭಿಭೂತರಾಗುವಂತೆ ಮಾಡಿದ್ದಾರೆ.
ಅವಧಿಗೂ ಮುನ್ನ ವಿಧಾನಸಭೆ ಚುನಾವಣೆಗೆ ಹೋಗುವ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
2017-18ರ ಬಜೆಟ್ ಕೂಡ ಚುನಾವಣೆ ಪೂರಕ ಆಯವ್ಯಯವಾಗಿತ್ತು. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಣತಿ ಮೇರೆಗೆ ಸಿದ್ದರಾಮಯ್ಯ ಬಲವಂತವಾಗಿ ಸಾಲಮನ್ನಾ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಸರ್ಕಾರ ಘೋಷಿಸಿದ ನಂತರ ಕರ್ನಾಟಕ ಕೂಡ ಅದೇ ದಾರಿ ಅನುಸರಿಸಿದೆ. 
ಅವಧಿಗೂ ಮುನ್ನ ಚುನಾವಣೆಗೆ ಸಿದ್ಧರಾಗುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿರುವ ರಾಹುಲ್ , ಡಿಸೆಂಬರ್ ನಲ್ಲೇ ಚುನಾವಣೆ ನಡೆಸುವ ಸಾಧ್ಯತೆಯಿದೆ. ಅಷ್ಟರಲ್ಲಿ ರೈತರ ಸಾಲಮನ್ನಾ ಮಾಡಿ ಗುಡ್ ವಿಲ್ ಗಳಿಸಿಕೊಳ್ಳಬೇಕೆಂದು ತಾಕೀತು ಮಾಡಲಾಗಿದೆ.
ಗುಜರಾತ್ ಜೊತೆ ಕರ್ನಾಟಕ ವಿಧನಾಸಭೆ ಚುನಾವಣೆ ನಡೆಸಬೇಕೆಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ತಂತ್ರ ರೂಪಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕಕ್ಕಿಂತ ಹೆಚ್ಚಾಗಿ ಗುಜರಾತ್ ಚುನಾವಣೆ ಮೇಲೆ ತಮ್ಮ ಶಕ್ತಿ ಹಾಗೂ ಸಮಯ ಕೇಂದ್ರೀಕರಿಸುತ್ತಾರೆ ಎಂಬ ಉದ್ದೇಶದಿಂದ ಡಿಸೆಂಬರ್ ನಲ್ಲೇ ರಾಜ್ಯ ವಿಧಾನಸಭೆ ಚುನಾವಣೆ ನಡೆಸಲು ಸಿದ್ದತೆ ನಡೆಸುತ್ತಿದ್ದಾರೆ.
ಅವಧಿಗೂ ಮುನ್ನ ಚುನಾವಣೆ ನಡೆಯುತ್ತದೆ ಎಂಬ ಮಾತನ್ನು ಸಿಎಂ ಸಿದ್ದರಾಮಯ್ಯ ಹಲವು  ಬಾರಿ ತಳ್ಳಿ ಹಾಕಿದ್ದಾರೆ. ಆದರೆ ಕಾಂಗ್ರೆಸ್ ತಂತ್ರಗಾರಿಕೆ ಬಗ್ಗೆ ತಮಗೆ ಚೆನ್ನಾಗಿ ಅರಿವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಅವಧಿ ಪೂರ್ವ ಚುನಾವಣೆ ನಡೆಸಲು ರಾಹುಲ್ ಗಾಂಧಿ ನೇತೃತ್ವದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ