ಎಚ್. ಡಿ ಕುಮಾರಸ್ವಾಮಿ 
ರಾಜಕೀಯ

ಜಂತಕಲ್ ಮೈನಿಂಗ್ ಪ್ರಕರಣ: ಆರೋಪ ಸಾಬೀತಾದ್ರೆ ನೇಣು ಹಾಕಿಕೊಳ್ತೇನೆ- ಎಚ್ ಡಿಕೆ

ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಾನು ತಪ್ಪಿತಸ್ಥ ಎಂದು ಸಾಬೀತಾದ್ರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುವುದಾಗಿ ಮಾಜಿ ಸಿಎಂ...

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಾನು ತಪ್ಪಿತಸ್ಥ ಎಂದು ಸಾಬೀತಾದ್ರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುವುದಾಗಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ತನಿಖೆಯಿಂದ ನನ್ನ ಮೇಲಿನ ಆರೋಪ ಸಾಬೀತು ಪಡಿಸಲಿ, ನಾನು ಕಿಕ್ ಬ್ಯಾಕ್ ತೆಗೆದುಕೊಂಡಿದ್ದೇನೆ ಎಂದು ಹೇಳಲಾಗುತ್ತಿದೆ. ನನ್ನ ಜೊತೆ ಹುಡುಗಾಟ ಆಡುತ್ತಿದ್ದಾರಾ? ಚೆಲ್ಲಾಟ ಆಡುತಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ನನ್ನ ಹೆಸರು ಹಾಳು ಮಾಡಲು ಪೆನ್ ಡ್ರೈವ್, ಸಿಡಿ ತೋರಿಸುತ್ತಿದ್ದೀರಾ, ಸಿಡಿ ಪೆನ್ ಡ್ರೈವ್ ತೋರಿಸಿ ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ರೈತರ ಸಾಲ ಮನ್ನಾ ಮಾಡಿದ್ರೆ ಅದು ಫ್ಯಾಶನ್, ಆದರೆ ಕಾರ್ಪೋರೇಟ್ ಕುಳಗಳ ಸಾಲ ಮಾಡಿದ್ರೆ ಅದು ಏನು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಅದು ದೇಶ ಉದ್ದಾರದಾ ಕೆಲಸವಾ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ರೈತರ ಸಾಲವನ್ನು ರಾಜ್ಯ ಸರ್ಕಾರವೇ ಮಾಡಲಿ, ಈಗಾಗಲೇ ಕೇಂದ್ರ ಸರ್ಕಾರ ಸಾಲಮನ್ನಾ ಮಾಡುವುದಿಲ್ಲ ಎಂದು ಹೇಳಿದೆ, ಕೇಂದ್ರದ ಬಳಿ ಪದೇ ಪದೇ ಹಲ್ಲು ಕಿರಿದು ನಿಲ್ಲುವುದರ ಬದಲು ರಾಜ್ಯ ಸರ್ಕಾರವೇ ಸಾಲಮನ್ನಾ ಮಾಡಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT