ರಾಜಕೀಯ

ಭಿನ್ನಾಭಿಪ್ರಾಯ ಬದಿಗಿಟ್ಟು ಕ್ರಿಯಾತ್ಮಕವಾಗಿ ಕೆಲಸ ಮಾಡಿ: 'ಕೈ' ಕಾರ್ಯಕರ್ತರಿಗೆ ವೇಣುಗೋಪಾಲ್ ಕಿವಿಮಾತು

Shilpa D
ಬೆಂಗಳೂರು: ಮುಂದಿನ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ,ಸಿ ವೇಣುಗೋಪಾಲ್ ಬುಧವಾರ ಹಲವು ಘಟಕಗಳ ಮುಖಂಡರ ಜೊತೆ ಸಭೆ ನಡೆಸಿದರು.
ಒಂದರ ಮೇಲೊಂದು ಸಭೆ ನಡೆಸಿದ ವೇಣುಗೋಪಾಲ್, ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಮನವೊಲಿಸುವಂತೆ ಪ್ರೇರೇಪಣೆ ನೀಡಿದ್ದಾರೆ. ಯೂಥ್  ಕಾಂಗ್ರೆಸ್, ಮಹಿಳಾ ಘಟಕ, ಎಸ್ ಎಸ್ಸಿ ಎಸ್ ಟಿ ಮೋರ್ಚಾ, ಕೃಷಿ ಘಟಕ ಸೇರಿದಂತೆ ಹಲವು ವಿಭಾಗಗಳ ಜೊತೆ ಸಭೆ ನಡೆಸಿದ ವೇಣುಗೋಪಾಲ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಖ ಜಿ. ಪರಮೇಶ್ವರ್ ಮತ್ತು ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಜರಿದ್ದರು, ಮಂಗಳವಾರ ಜಿಲ್ಲಾ ಮುಖಂಡರ ಸಭೆಗೆ ಹಾಜರಿದ್ದ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ  ಹುದ್ದೆಗೆ ಮೀರಾ ಕುಮಾರ್ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದರು. 
ಕಾಂಗ್ರೆಸ್ ನ ವಿವಿಧ ವಿಭಾಗದ ಮುಖಂಡರು ಹಾಗೂ ಸದಸ್ಯರುಗಳು ಕಳೆದ ನಾಲ್ಕು ವರ್ಷಗಳಲ್ಲಿ ಪಕ್ಷ ಸಂಘಟನೆಗೆ ಕೈಗೊಂಡಿರುವ ಮಾಹಿತಿ ಕೋರಿದ್ದಾರೆ, 
ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳದವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವೇಣುಗೋಪಾಲ್,  ಮತ್ತಷ್ಟು  ಕ್ರಿಯಾಶೀಲವಾಗಿ ಕೆಲಸ ಮಾಡುವಂತೆ ಸಲಹೆ ಸೂಚನೆ ನೀಡಿದ್ದಾರೆ.
SCROLL FOR NEXT